ಮಂಗಳೂರು: ಬಿಜೆಪಿ ಅಭ್ಯರ್ಥಿಗಳನ್ನು ಟೆಂಪಲ್ ರನ್ ಜತೆಗೆ ಚರ್ಚೆಯಲ್ಲಿ ಕಾರ್ಯಕರ್ತರೊಡನೆ ಬುಧವಾರ ಕಳೆದರು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಅವರು ಮನೆಗೆ ಬಂದಿದ್ದ ಪಾಲಿಕೆ ಸದಸ್ಯರು, ಕಾರ್ಯಕರ್ತರ ಸಭೆ ನಡೆಸಿ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಡಾ| ಭರತ್ ಶೆಟ್ಟಿ ಅವರು ತಮ್ಮ ನಿವಾಸದಲ್ಲಿ ವಿವಿಧ ಬೂತ್ ಮಟ್ಟದ ಕಾರ್ಯಕರ್ತರ ಜತೆ ಸಭೆ ನಡೆಸಿದರು. ಗಂಜಿಮಠ, ಪಡು ಪೆರಾರದಲ್ಲಿ ಕಾರ್ಯಕರ್ತರ ಸಭೆ ನಡೆಸಿ, ದೇವಾಲಯ, ದೈವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮೊದಲ ಬಾರಿಗೆ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಸತೀಶ್ ಕುಂಪಲ ಮಂಗಳೂರು ಕ್ಷೇತ್ರದ ಅಭ್ಯರ್ಥಿ. ಬೆಳಗ್ಗೆ ತಮ್ಮ ನಿವಾಸದಲ್ಲಿ ಕಾರ್ಯಕರ್ತರ ಜತೆ ಸಮಾಲೋಚನೆ ನಡೆಸಿದ ಬಳಿಕ ಅವರು, ಕುಂಪಲದ ಬಾಲಕೃಷ್ಣ ಮಂದಿರ,
ದುರ್ಗಾ ಪರಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಆರೆಸ್
ಮತ್ತು ಬಿಜೆಪಿಯ ಹಿರಿಯನ್ನು ಭೇಟಿ ಮಾಡಿದರು. ಮಂಗಳೂರು ಉತ್ತರದ ಅಭ್ಯರ್ಥಿ ಡಾ| ಭರತ್ ಶೆಟ್ಟಿ ವೈ. ಅವರು ಕಾರ್ಯಕರ್ತರೊಂದಿಗೆ ಸಮಾಲೋಚನೆ, ಸಭೆ ನಡೆಸಿದರು.
ಮೂಲ್ಕಿ-ಮೂಡುಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಮಂಗಳೂರು ದಕ್ಷಿಣದ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಅವರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
