ಮಂಗಳೂರು : ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮತ್ತೋರ್ವ ಕಾರ್ಯಾಧ್ಯಕ್ಷರಾಗಿ ಶ್ರೀ ವಸಂತ್ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು ನಗರದ ಜೆಪಿ ಭವನದಲ್ಲಿರುವ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ವಸಂತ ಪೂಜಾರಿಯವರಿಗೆ ಅಧಿಕೃತ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು.
ಈ ಹಿಂದೆ ಶ್ರೀ ಶಶಿರಾಜ್ ಶೆಟ್ಟಿ ಕೊಳಂಬೆ ಅವರು ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದು, ಇದೀಗ ಮತೊರ್ವ ಕಾರ್ಯದ್ಯಕ್ಷರಾಗಿ ವಸಂತ್ ಪೂಜಾರಿ ಅವರು ನೇಮಕಗೊಂಡಿದ್ದು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

