ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಡಾ.ಮಾಲತಿ ಶೆಟ್ಟಿ ಮಾಣೂರು ರವರಿಗೆ ಪ್ರದಾನ ಬೆಂಗಳೂರಿನ ನಿರ್ಮಾತೃ ನಾಡ ಪ್ರಭು ಕೆಂಪೇಗೌಡ ಸ್ಮರಣಾರ್ಥ ಬೆಂಗಳೂರಿನ ಸಮಥ ಸಾಹಿತ್ಯ, ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಆಗಸ್ಟ್ 9 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಇಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಾಹಿತಿ ,ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದು . ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು . ಕಾರ್ಯಕ್ರಮದ ಉದ್ಘಾಟನೆಯನ್ನು ಜೆ.ಕೆ ರಶ್ಮಿ ಐಪಿಎಸ್ ಪೊಲೀಸ್ ಮಹಾ ನಿರೀಕ್ಷಕರು ಬೆಂಗಳೂರು ಮಾಡಿದರು .ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಂ ಶ್ರೀನಿವಾಸ್ ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಡಾ. ಶರವಣ , ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಉದ್ಯಮ ಕನ್ನಡ ಪರ ಸಂಘದ ಸಂಘಟನೆಯ ಒಕ್ಕೂಟ ಅಧ್ಯಕ್ಷರಾದ ಎಂ .ತಿಮ್ಮಯ್ಯ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದರು . ಕಾರ್ಯಕ್ರಮ ಸಂಯೋಜಕರಾದ ಎಸ್ ಆರ್ ವಿಜಯ ಸಮರ್ಥ ಸ್ವಾಗತಿಸಿದರು. ಶ್ರೀ ಮತಿ ಭಾರತಿ ಕಾರ್ಯಕ್ರಮ ನಿರೂಪಿಸಿದರು.
Trending
- ತುಳು ಭಾಷೆಗೆ ಅಧಿಕೃತ ಮಾನ್ಯತೆ: ವಿಶ್ವದಾದ್ಯಂತ ನೆಲೆಸಿರುವ ತುಳುವರ ಕಾತರ ಸೆ.18ರ ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸುದಿನದ ನಿರ್ಧಾರ ಹೊರಬರಲಿ: ಪುರುಷೋತ್ತಮ್ ಚೇಂಡ್ಲಾ
- ನಾಗರಿಕ ವೇದಿಕೆ ನರ್ನಾಡು–ಮದಗ ಲೇಔಟ್ನ 4ನೇ ವರ್ಷದ ಗಣೇಶೋತ್ಸವ ವಿಜೃಂಭಣೆಯಿಂದ ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ, ಸಮಾಜ ಸೇವಕರಿಗೆ ಸನ್ಮಾನ
- ವಿಘ್ನವಿನಾಯಕನ ಆಗಮನಕ್ಕೆ ತುಳುನಾಡಿನಲ್ಲಿ ಕಂಗೊಳಿಸಿದೆ ಮನೆಮನೆಗಳಲ್ಲಿ ಭಕ್ತಿ–ಮಂಟಪಗಳಲ್ಲಿ ಸಂಭ್ರಮ; ಶಾಂತಿ, ಸೌಹಾರ್ದಕ್ಕೆ ಪೊಲೀಸ್ ಕಟ್ಟೆಚ್ಚರ
- ಕದ್ರಿ ಮಾರ್ಕೆಟ್ನಲ್ಲಿ ಕೊಂಕಣ್ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ಶಾಖೆ ಉದ್ಘಾಟನೆ ಗ್ರಾಹಕರಿಗೆ ಸುಲಭ ಹಣಕಾಸು ಸೇವೆ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ
- ಮಾದಕ ವ್ಯಸನದ ವಿರುದ್ಧ ಮಂಗಳೂರು ಪೊಲೀಸರ ಸಮರ: 9 ಮಂದಿ ಬಂಧನ
- ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಬಂಡೆ ಸ್ಫೋಟ: ಇಬ್ಬರ ಬಂಧನ
- ಡಾ.ಎಂ ಫಾರೂಕ್ ಚಂದ್ರನಗರ ಇವರಿಗೆ ಸುನ್ನಿ ಯುವ ಸಂಘ, ಕೆ.ಎಂ.ಜೆ, ಎಸ್.ಎಸ್.ಎಫ್ ಮಜೂರು ಘಟಕದ ವತಿಯಿಂದ ಸನ್ಮಾನ
- ಸತೀಶ್ ಜಾರಕಿಹೊಳಿ ಆಪ್ತರ ನಿವಾಸ, ಕಚೇರಿಗಳ ಮೇಲೆ ಇ.ಡಿ. ಶೋಧ ₹3.3 ಕೋಟಿ ಲೆಕ್ಕಕ್ಕೆ ಬಾರದ ನಗದು, ₹15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶ

