Sunday, October 2, 2022

ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ‌ ಮೃತ್ಯು

ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ...
More

    Latest Posts

    ಕಾಪು: ಕಡಲ ತೀರದಲ್ಲಿ ಭಾರೀ ಗಾತ್ರದ “ತೊರಕೆ”ಮೀನುಗಳ ಸುಗ್ಗಿ !

    ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ...

    ಕುಂಬಳೆ: ಅ.10 ರಂದು ಅನಂತಪುರದಲ್ಲಿ “ಪುವೆಂಪು ನೆಂಪು” ತುಳು ಲಿಪಿ ದಿನಾಚರಣೆ

    ಕುಂಬಳೆ: ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಮೊದಲ ಅಧ್ಯಕ್ಷರು, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟು ಹಬ್ಬದ ಪ್ರಯುಕ್ತ "ಪುವೆಂಪು - ನೆಂಪು"...

    ಗಾಂಜಾ ಸೇವನೆ: 35 ಮಣಿಪಾಲ ವಿದ್ಯಾರ್ಥಿಗಳು ವಶಕ್ಕೆ

    ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್...

    ಮಂಗಳೂರು: ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ

    ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ ಕುಮಾರ್‌ ಕೋಡಿಕಲ್‌ ಇವರ ನೇತೃತ್ವದಲ್ಲಿ ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ ಕಾರ್ಯಕ್ರಮ ಇಂದು ನಡೆಯಿತು.

    ಸ್ವ ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆಯೊಂದಿಗೆ ಸದೃಢ ಸಮಾಜ ನಿರ್ಮಾಣ ಸಾಧ್ಯ -ಡಾ.ರಾಜೇಂದ್ರ ಕೆ.ವಿ

    ಮಂಗಳೂರು:ಆರ್ಥಿಕ ಸ್ವಾವಲಂಬನೆ ಸಾಧಿಸಲು ಸ್ವ ಉದ್ಯೋಗವನ್ನು ಸೂಕ್ತವಾದ ಮಾಹಿತಿಯೊಂದಿಗೆ ಮಾಡುವುದರಿಂದ ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದರು.

    ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೋಟಗಾರಿಕಾ ಇಲಾಖೆ, ಮೀನುಗಾರಿಕಾ ಇಲಾಖೆ ಮತ್ತು ಪಶು ಸಂಗೋಪನಾ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಹಮ್ಮಿಕೊಂಡಿದ್ದ ಸ್ವ ಉದ್ಯೋಗ ಮಾಹಿತಿ ಶಿಬಿರವನ್ನು ನಗರದ ಬೆಂದೂರ್ ವೆಲ್ ನಲ್ಲಿರುವ ತೋಟಗಾರಿಕಾ ಇಲಾಖೆಯ ಸಭಾಂಗಣದಲ್ಲಿಂದು ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

    ನಮ್ಮ ಪರಿಸರದಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಸ್ವ ಉದ್ಯೋಗ ವನ್ನು ಕೈ ಗೊಂಡು ವೈಯಕ್ತಿಕ ಆಧಾಯ ಹೆಚ್ಚು ಮಾಡಿಕೊಂಡು. ಆರ್ಥಿಕವಾಗಿ ಸದೃಢತೆಯನ್ನು ಸಾಧಿಸಬಹುದು. ಕೋವಿಡ್ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರದಲ್ಲಿ ಆಗಿರುವ ಆರ್ಥಿಕ ಹೊಡೆತದಿಂದ ಕಷ್ಟ ನಷ್ಟ ಅನುಭವಿಸಿದವರಿಗೆ ವಿವಿಧ ಕ್ಷೇತ್ರದಲ್ಲಿ ಸ್ವ ಉದ್ಯೋಗ ಕೈ ಗೊಳ್ಳಲು ಪತ್ರ ಕರ್ತರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಮಾಹಿತಿ ಶಿಬಿರವನ್ನು ಹಮ್ಮಿಕೊಂಡಿರುವುದು ಮಾದರಿಯಾಗಿದೆ ಎಂದು ಅವರು ತಿಳಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಮಾತನಾಡಿ, ಸ್ವ ಉದ್ಯೋಗ ಮಾಡಲು ಮೊದಲು ಆಸಕ್ತಿ ಮುಖ್ಯ. ಜೊತೆಗೆ ಆ ಕ್ಷೇತ್ರದ ಮಾಹಿತಿ, ಕೌಶಲ್ಯ, ಸರಕಾರದ ಸಹಾಯವನ್ನು ಪಡೆದು ಕೊಂಡು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಬಹುದು ಎಂದರು.

    ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಸ್ತಾವಿಕವಾಗಿ ಮಾತನಾಡಿದರು.

    ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎಚ್ ಆರ್.ನಾಯ್ಕ್ , ದ.ಕ ಪಶು ಸಂಗೋಪನಾ ಇಲಾಖಾ ಉಪನಿರ್ದೇಶಕ ಡಾ.ಪ್ರಸನ್ನ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜೀತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಪ್ರವೀಣ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆಯ ಪಾಲಿಸಿಯನ್ನು ರೈತರಿಗೆ ಮತ್ತು ತರಕಾರಿ ಗಿಡಗಳನ್ನು ಪತ್ರಕರ್ತರಿಗೆ ಸಾಂಕೇತಿಕವಾಗಿ ವಿತರಿಸಿಸಲಾಯಿತು. ಪತ್ರ ಕರ್ತರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಜೇನು ಕೃಷಿ, ಅಣಬೆ ಕೃಷಿ, ಹೈನುಗಾರಿಕೆ, ಕೋಳಿ ಸಾಕಾಣಿಕೆ , ಮೀನುಗಾರಿಕೆ ಬಗ್ಗೆ ಮಾಹಿತಿ ಶಿಬಿರ ನಡೆಯಿತು.

    Latest Posts

    ಕಾಪು: ಕಡಲ ತೀರದಲ್ಲಿ ಭಾರೀ ಗಾತ್ರದ “ತೊರಕೆ”ಮೀನುಗಳ ಸುಗ್ಗಿ !

    ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ...

    ಕುಂಬಳೆ: ಅ.10 ರಂದು ಅನಂತಪುರದಲ್ಲಿ “ಪುವೆಂಪು ನೆಂಪು” ತುಳು ಲಿಪಿ ದಿನಾಚರಣೆ

    ಕುಂಬಳೆ: ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಮೊದಲ ಅಧ್ಯಕ್ಷರು, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟು ಹಬ್ಬದ ಪ್ರಯುಕ್ತ "ಪುವೆಂಪು - ನೆಂಪು"...

    ಗಾಂಜಾ ಸೇವನೆ: 35 ಮಣಿಪಾಲ ವಿದ್ಯಾರ್ಥಿಗಳು ವಶಕ್ಕೆ

    ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್...

    ಮಂಗಳೂರು: ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ

    ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ ಕುಮಾರ್‌ ಕೋಡಿಕಲ್‌ ಇವರ ನೇತೃತ್ವದಲ್ಲಿ ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ ಕಾರ್ಯಕ್ರಮ ಇಂದು ನಡೆಯಿತು.

    Don't Miss

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

    ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

    ಮಳಲಿ ಮಸೀದಿ ವಿವಾದ: ಅ.17ಕ್ಕೆ ತೀರ್ಪು ಕಾಯ್ದಿರಿಸಿದ ಮಂಗಳೂರು ಸಿವಿಲ್‌ ಕೋರ್ಟ್‌

    ಮಂಗಳೂರು: ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ...

    ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ -ಮೂವರು ಪೊಲೀಸ್ ವಶಕ್ಕೆ

    ಪುತ್ತೂರು: ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವಿನ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸೆಪ್ಟಂಬರ್ 26ರ ಸೋಮವಾರ ಸಂಜೆ ಉಪ್ಪಿನಂಗಡಿಯ ಬಸ್...

    ಬೆಳ್ತಂಗಡಿ: ಅಪಘಾತ ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ ಹೊಡೆದ ಲಾರಿ

    ಬೆಳ್ತಂಗಡಿ: ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಹೋಗಿ ಲಾರಿಯೊಂದು ರಸ್ತೆ ಬದಿಯ ಮನೆಗೆ ಡಿಕ್ಕಿಹೊಡೆದ ಘಟನೆ ಮಂಗಳವಾರ ಸಂಭವಿಸಿದೆ. ಅತಿಯಾದ ವೇಗದಲ್ಲಿ ಬಂದ...