Monday, July 22, 2024
spot_img
More

  Latest Posts

  ಸರ್ಕಾರಿ ಆಸ್ಪತ್ರೆಯ ಡ್ಯೂಟಿ ರೂಂನಲ್ಲೇ ವೈದ್ಯ ಆತ್ಮಹತ್ಯೆ..!

  ಬೆಂಗಳೂರು:ಸರ್ಕಾರಿ ಆಸ್ಪತ್ರೆಯಲ್ಲೇ ವೈದ್ಯರೊಬ್ಬರು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ತಿಲಕ್​ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯರು.

  ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ರೇಣುಕಾನಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಾಗಿದೆ. ಇದರಿಂದ ಬೇಸತ್ತು ಅವರು ಆಸ್ಪತ್ರೆಯ ಡ್ಯೂಟಿ ರೂಮ್​ನಲ್ಲೇ ತಾಯಿಯ ಸೀರೆಯಿಂದ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

  ವೈದ್ಯರು ನೇಣಿಗೆ ಶರಣಾಗಿರುವ ಬಗ್ಗೆ ಆಸ್ಪತ್ರೆ ಸಿಬ್ಬಂದಿ ತಿಲಕ್​ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರಿನ ಅನ್ವಯ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  ಸದ್ಯ ಮರಣೋತ್ತರ ಪರೀಕ್ಷೆಗಾಗಿ ರೇಣುಕಾನಂದ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss