ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ ಕಟ್ಟುವ ಕಲ್ಲಿನ ಕಂಬ ಹಾಗೂ ಆನೆಗೆ ನೀರು ಕುಡಿಯಲು ನಿರ್ಮಿಸಿದ ನೀರಿನ ಕಲ್ಲಿನ ಕೊಪ್ಪರಿಗೆ ಪತ್ತೆಯಾಗಿದೆ.
ಕೊಪ್ಪರಿಗೆ ಹಿಂದೆ ಮಣ್ಣಿನ ಅಡಿಯಲ್ಲಿ ಹೂತು ಹೋಗಿದ್ದು ಆನೆ ಕಟ್ಟುವ ಕಂಬ ಮೊದಲಿನಿಂದಲೂ ಇಲ್ಲಿ ರಸ್ತೆ ಬದಿ, ಕಾಣುತ್ತಿತ್ತು. ಆದರೆ ಆನೆಗೆ ನೀರಿಡುವ ಕೊಪ್ಪರಿಗೆ ಕಾಣಿಸುತ್ತಿರಲಿಲ್ಲ. ಇಲ್ಲಿ ಆ ಕೊಪ್ಪರಿಗೆ ಇತ್ತು ಎಂಬ ಮಾತನ್ನು ಕೇಳಿದ ವಿದ್ಯಾರ್ಥಿಗಳಾದ ಸುಹಾಸ ಮಲ್ಯ, ಸಮರ್ಥ, ರಿತೀಶ್, ಅನ್ವಿತ್ ಮಲ್ಯ ಆಸಕ್ತಿಯಿಂದ ಅದನ್ನು ಹುಡುಕಿ ಹೊರಗೆ ತೆಗೆದಿದ್ದಾರೆ.
