ಮಂಗಳೂರು: 5 ದಶಕಕ್ಕೂ ಹಳೆಯದಾದ ನೀರಿನ ಪೈಪ್ ಭೂಮಿಯ ಆಳದಲ್ಲಿ ಒಡೆದು ಹೋಗಿ ರಸ್ತೆ ಕುಸಿದ ಘಟನೆ ನಗರದ ಕಂಕನಾಡಿಯ ಪಂಪ್‌ವೆಲ್ ಜಂಕ್ಷನ್ ಬಳಿ ಮಧ್ಯಾಹ್ನ ವೇಳೆ ನಡೆದಿದೆ.
1956ರಲ್ಲಿ ತುಂಬೆ ಡ್ಯಾಂನಿಂದ ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಹಿನ್ನೆಲೆಯಲ್ಲಿ ಪೈಪ್ ಅಳವಡಿಸಲಾಗಿತ್ತು. ಅದನ್ನು ಬದಲಾಯಿಸದ ಪರಿಣಾಮ ಶಿಥಿಲಗೊಂಡು ಇಂದು ಒಡೆದು ಹೋಗಿದೆ. ಇದು ರಸ್ತೆ ಮಧ್ಯೆ ಇರುವ ಪರಿಣಾಮ ಆಳವಾದ ಬಿರುಕು ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ನಗರ ಪ್ರವೇಶಿಸುವ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗಿದೆ.