Friday, March 29, 2024
spot_img
More

    Latest Posts

    ಪುತ್ತೂರು: ನಡುರಸ್ತೆಯಲ್ಲಿ ರಿಕ್ಷಾ ನಿಲ್ಲಿಸಿ ಕುಡಿದು ನಿದ್ರಿಸಿದ ಚಾಲಕ.!

    ಪುತ್ತೂರು: ಪುತ್ತೂರು-ದರ್ಬೆ ರಸ್ತೆಯ ಕಲ್ಲಾರೆ ಎಂಬಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ವಾಹನವನ್ನು ನಡುರಸ್ತೆಯಲ್ಲಿ ನಿಲ್ಲಿಸಿ ಕುಡಿದು ಮಲಗಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

    ಕಲ್ಲಾರೆ ಧನ್ವಂತ್ರಿ ಆಸ್ಪತ್ರೆ ಎದುರು ಆಟೋ ಚಾಲಕ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕುಡಿದು ಮಲಗಿದ್ದನ್ನು ಗಮನಿಸಿದ ಸಾರ್ವಜನಿಕರು ಪುತ್ತೂರು ಟ್ರಾಫಿಕ್ ಪೊಲೀಸರಿಗೆ ಮಾಹಿತಿ ನೀಡಿ ಅಪಾಯ ತಪ್ಪಿಸಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದಾಗ ಆಟೋ ಚಾಲಕ ಪಾನಮತ್ತನಾಗಿದ್ದ.ಸಂಚಾರ ಪೊಲೀಸರು ಆಟೊ ಚಾಲಕನ ವಿರುದ್ಧ ಡ್ರಿಂಕ್ ಅಂಡ್ ಡ್ರೈವ್ ಕೇಸ್ ದಾಖಲಿಸಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss