ಉಪ್ಪಿನಂಗಡಿ ಡಿಸೆಂಬರ್ 08 : ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮದ್ಯೆ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆಯ ಗಣಪತಿ ಕಟ್ಟೆ ಎಂಬಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಇನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಚಾಲಕ ನಿಯಂತ್ರಣ ತಪ್ಪಿ ಕಾರು ರಸ್ತೆ ಮಧ್ಯದಲ್ಲಿದ್ದ ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಕಾರಿನಲ್ಲಿದ್ದ ವಾಸು ಮತ್ತವರ ಪತ್ನಿ ವೀಣಾ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದಾರೆ.