Friday, March 29, 2024
spot_img
More

    Latest Posts

    ಅಪ್ರಾಪ್ತರಿಗೆ ವಾಹನ ಚಾಲನೆಗೆ ನೀಡುವ ಪೋಷಕರಿಗೆ ಬಿಗ್ ಶಾಕ್ : 20 ಸಾವಿರ ರೂ. ದಂಡ!

    ಹಾಸನ : ಅಪ್ರಾಪ್ತ ಮಕ್ಕಳಿಗೆ ವಾಹನಗಳನ್ನು ನೀಡುವ ಪೋಷಕರಿಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದುಉ, ವಾಹನ ಚಾಲನೆ ಮಾಡಿದ ಬಾಲಕನ ಪೋಷಕರಿಗೆ ಜೆಎಂಎಫ್‌ಸಿ ನ್ಯಾಯಾಲಯ 20 ಸಾವಿರ ದಂಡ ವಿಧಿಸಿದೆ.

    ಅಪ್ರಾಪ್ತ ಬಾಲಕ ವಾಹನ ಚಲಾಯಿಸುವ ಮೂಲಕ ನಿಯಮ ಉಲ್ಲಂಘಿಸಿದ ಘಟನೆ 2021 ಹಳೇಬೀಡು ವ್ಯಾಪ್ತಿಯಲ್ಲಿ ನಡೆದಿತ್ತು.

    ಈ ಹಿನ್ನೆಲೆ 2022ರ ಮೇ 26 ರಂದು ನ್ಯಾಯಾಲಯದಲ್ಲಿ ಸಿವಿಲ್ ಜೆಎಂಎಫ್‍ಸಿ ನ್ಯಾಯಾಧೀಶ ರಾದ ಸಿ.ಪ್ರಸನ್ನ ಕುಮಾರ್ ವಿಚಾರಣೆ ನಡೆಸಿದರು. ಈ ವೇಳೆ ನ್ಯಾಯಾಧೀಶರು, ಅಪ್ರಾಪ್ತ ಬಾಲಕ ನಿಯಮ ಉಲ್ಲಂಘಿಸಿದ ಹಿನ್ನೆಲೆ 20 ಸಾವಿರ ರೂ. ದಂಡ ವಿಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಂ.184 ಅಡಿಯಲ್ಲಿ ಕೇಸ್ ದಾಖಲಿಸಿ ಚಾಲನೆ ಮಾಡುತ್ತಿದ್ದ ಬಾಲಕ ಅಜಾಗರೂಕತೆ, ಹೆಲ್ಮೆಟ್ ಇಲ್ಲದೆ ಚಾಲನೆ, ಲೈಸೆನ್ಸ್ ಇಲ್ಲದೆ ಚಾಲನೆ ಮಾಡಿದ್ದರಿಂದ ತಲಾ ಒಂದೊಂದು ಸಾವಿರದಂತೆ ನಾಲ್ಕು ಸಾವಿರ ದಂಡ ವಿಧಿಸಲಾಗಿದೆ. ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಮಾಲೀಕನಿಗೆ 16 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss