ಕರಾವಳಿಯ ಹಲವೆಡೆ ಬೆಳಗ್ಗಿನಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಮಂಗಳೂರು ನಗರ ಸೇರಿದಂತೆ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಇನ್ನು ಮುಂದಿನ 3-4 ದಿನ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದಕ್ಷಿಣ ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಮತ್ತು ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ತಿಳಿಸಿದೆ.ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆಯಿದ್ದು ದಕ್ಷಿಣ ಕನ್ನಡ, ಉಡುಪಿ ಸೇರಿ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು ಕೆಲವೆಡೆ ಮಳೆಯಾಗುತ್ತಿದೆ. ಅಲ್ಲದೆ, ಅರಬ್ಬಿ ಸಮುದ್ರದಲ್ಲಿ ಗಂಟೆ ಕರಾವಳಿಯಲ್ಲಿ 40-55ಕಿಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
Trending
- ಕಾಡು ಬಿಟ್ಟು ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶರಣಾದ ನಕ್ಸಲರು
- ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಮಣಿಪಾಲ ಪೊಲೀಸರಿಂದ ಇಬ್ಬರ ಬಂಧನ
- ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರಿಗೆ ಗೌರವ ಸನ್ಮಾನ
- ಕುಂದಾಪುರ ತುಳುನಾಡ ರಕ್ಷಣಾ ವೇದಿಕೆ ಘಟಕದ ವತಿಯಿಂದ ಕುಂದಾಪುರ ಪುರಸಭೆಗೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಯುತ ಪ್ರಭಾಕರ್ ವಿ ಅವರಿಗೆ ಅಭಿನಂದನೆ ಕಾರ್ಯಕ್ರಮ
- ಹೆಬ್ರಿ : ಉಲಾಯಿ ಪಿದಾಯಿ ಜುಗಾರಿ ಹಡ್ಡೆಗೆ ಪೊಲೀಸ್ ದಾಳಿ 7 ಮಂದಿ ಉಲಾಯಿ
- ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ ಕೈಗೊಳ್ಳುವಾಗ ಸೂಕ್ತ ಮುನ್ನೆಚ್ಚರಿಕೆ ಸುರಕ್ಷತೆ ಕ್ರಮ ಕೈಗೊಳ್ಳುವಂತೆ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
- ಮಂಗಳೂರು: ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ತಾಲೂಕು ಇದರ ನೂತನ ಪದಾಧಿಕಾರಿಗಳ ಪದಗ್ರಹಣದ ಉದ್ಘಾಟನಾ ಕಾರ್ಯಕ್ರಮ
- ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಹುತಾತ್ಮ ಸೈನಿಕ ಅನೂಪ್ ಪೂಜಾರಿಯವರ ಶ್ರದ್ಧಾಂಜಲಿ ಕಾರ್ಯಕ್ರಮ