ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ನಿಶಾ ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಳ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಾಳೆ.
ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದು, ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ನಿಶಾ ಎಂಬ ಬಾಲಕಿಯು ಮೃತಪಟ್ಟಿರುತ್ತಾರೆ. ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ.