ಶಿವಮೊಗ್ಗ: ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಯೊಬ್ಬ ಸೋಮವಾರ ಬೆಳಗ್ಗೆ ಹಾಸ್ಟೆಲ್ ರೂಂನಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕಲಬುರ್ಗಿ ಜಿಲ್ಲೆ ಚಿಂಚೊಳ್ಳಿ ಗ್ರಾಮದ ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ 3ನೇ ಸೆಮಿಸ್ಟರ್ ವಿದ್ಯಾರ್ಥಿ ಸಂದೀಪ್ ಆತ್ಮಹತ್ಯೆ ಮಾಡಿಕೊಂಡವ.
ಒಂದು ವಾರದ ಹಿಂದಷ್ಟೇ ಮೂರನೇ ಸೆಮಿಸ್ಟರ್ ಪರೀಕ್ಷೆ ಮುಗಿದಿತ್ತು. ಈತನ ಜತೆಗಿದ್ದ ಮತ್ತಿಬ್ಬರು ಸಹಪಾಠಿಗಳು ಊರಿಗೆ ತೆರಳಿದ್ದರು.
ನಾಲ್ಕು ದಿನದಿಂದ ರೂಮ್ನಲ್ಲಿ ಒಬ್ಬನೇ ಇದ್ದ ಸಂದೀಪ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಎರಡು ದಿನದಿಂದ ಕೊಠಡಿಯಿಂದ ಹೆಚ್ಚಾಗಿ ಹೊರಬರುತ್ತಿರಲಿಲ್ಲ. ಬೆಳಗ್ಗೆ ಉಪಹಾರ ಮತ್ತು ಮಧ್ಯಾಹ್ನ ಊಟಕ್ಕೂ ಬಾರದ ಹಿನ್ನಲೆಯಲ್ಲಿ ಅಕ್ಕಪಕ್ಕದವರು ಗಮನಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

