Thursday, September 28, 2023

ಯಶಸ್ವಿಯಾಗಿ ನಡೆದ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಮಹಿಳಾ ಘಟಕ ಸಭೆ

ತುಳುನಾಡ ರಕ್ಷಣಾ ವೇದಿಕೆ ಉಡುಪಿ ಮಹಿಳಾ ಘಟಕದ ಸಭೆ ಮಹಿಳಾ ಘಟಕ ಅಧ್ಯಕ್ಷರಾದ ಶೋಭಾ ಪಾಂಗಳ ರವರ ನೇತೃತ್ವದಲ್ಲಿ ದಿನಾಂಕ 24-09-2023 ರಂದು ಉಡುಪಿ ಹೋಟೆಲ್ ನೈವೇದ್ಯ ದಲ್ಲಿ ಜರುಗಿತ್ತು....
More

    Latest Posts

    ನಾಳೆಯ ಕರ್ನಾಟಕ ಬಂದ್ ಗೆ ಕರಾವಳಿಯಿಂದ ಬೆಂಬಲ ಇಲ್ಲ : ದಿಲ್ ರಾಜ್ ಆಳ್ವ

    ಕಾವೇರಿ ನದಿ ನೀರಿನ ಹೋರಾಟ ನಾಳೆ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಜನರು ಕಾವೇರಿ ಹೋರಾಟಕ್ಕೆ...

    ಉಪ್ಪಿನಂಗಡಿ: 500 ರೂ. ಟಿಕೆಟ್ ಖರೀದಿಸಿದ್ದ ಮೇಸ್ತ್ರಿಗೆ ಒಲಿದ 50 ಲಕ್ಷ ಬಂಪರ್ ಕೇರಳ ಲಾಟರಿ

    ಉಪ್ಪಿನಂಗಡಿಯ ಮೇಸ್ತ್ರಿಯೊಬ್ಬರಿಗೆ ಕೇರಳ ಅದೃಷ್ಟ ಲಾಟರಿ ಒಲಿದಿದೆ. ಕಾನತ್ತೂರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಇಳಂತಿಲ ನಿವಾಸಿ ಚಂದ್ರಯ್ಯ ಎಂಬುವವರು 500 ರೂಪಾಯಿಯ ಲಾಟರಿ ಟಿಕೆಟ್ ಖರೀದಿಸಿದ್ದರು. ಈ ಟಿಕೆಟ್‌ ಗೆ...

    ಸುಳ್ಯ : ಕೆವಿಜಿ ಪ್ರಿನ್ಸಿಪಾಲ್ ರಾಮಕೃಷ್ಣ ಕೊಲೆ ಪ್ರಕರಣ- ಕೆ.ವಿ.ಜಿ. ಪುತ್ರ ಡಾ.ರೇಣುಕಾಪ್ರಸಾದ್ ಸಹಿತ 6 ಮಂದಿ ದೋಷಿಗಳು.!

    ಬೆಂಗಳೂರು: 12 ವರ್ಷದ ಹಿಂದೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌  ಪ್ರಾಂಶುಪಾಲರಾಗಿದ್ದ ಎ.ಎಸ್‌ ರಾಮಕೃಷ್ಣ  ಅವರ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಡಾ.ರೇಣುಕಾ ಪ್ರಸಾದ್‌ ...

    ಸೆ.30ರಂದು ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ

    ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ ಕಾರ್ಯಕ್ರಮ ಸೆ.30 ಶನಿವಾರದಂದು ಬೆಳಗ್ಗೆ11.00 ಗಂಟೆಗೆ ವುಡ್ ಲ್ಯಾಂಡ್...

    ಮಂಗಳೂರು: ಪರಿಸರ ಸ್ನೇಹಿ ಚೌತಿ ಹಬ್ಬ ಆಚರಿಸಿ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

    ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಗಣೇಶೋತ್ಸವ ಶಾಂತಿಯುತ ವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಸಕಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಂಘಟ ಕರಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಗಣೇಶೋತ್ಸವ ಸಂದರ್ಭ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಅಧಿಕಾರಿಗಳು ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಪಿಒಪಿಯಿಂದ ತಯಾರಿಸಿದ ಗಣೇಶನ ಮೂರ್ತಿಗಳನ್ನು ಯಾವುದೇ ಕಾರಣಕ್ಕೂ ಬಳಸಲು ಅವಕಾಶವಿಲ್ಲ. ಉಳಿದಂತೆ ಶಬ್ದ ಮಾಲಿನ್ಯವಾಗದಂತೆ ಕ್ರಮ ವಹಿಸುವುದು, ಗಣೇಶೋತ್ಸವದ ಸಂದರ್ಭ ಹೆಚ್ಚು ಜನ ಸೇರುವಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ, ಆ್ಯಂಬುಲೆನ್ಸ್‌ ಗಳು ಸನ್ನದ್ಧವಾಗಿರುವಂತೆ ಹಾಗೂ ವಿಸರ್ಜನೆ ಸಂದರ್ಭ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ಈ ಸಂದರ್ಭ ಪ್ರತಿಕ್ರಿಯಿಸಿ, ಜಿಲ್ಲೆ ಯಲ್ಲಿ ಸಾರ್ವಜನಿಕವಾಗಿ ಗರಿಷ್ಠ 6.5 ಅಡಿ ಎತ್ತರದವರೆಗಿನ ಗಣೇಶ ಮೂರ್ತಿಗಳನ್ನು ಪೂಜಿಸಲಾಗುತ್ತಿದ್ದು, ಮಣ್ಣಿನಿಂದಲೇ ಈ ವಿಗ್ರಹಗಳನ್ನು ತಯಾರಿಸಲಾಗುತ್ತದೆ ಎಂದರು ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್‌ ಮಾತನಾಡಿ, ಜಿಲ್ಲೆಯಲ್ಲಿ ಹಲವು ವರ್ಷಗಳಿಂದಲೂ ಸಾರ್ವಜನಿಕವಾಗಿ ಪಿಒಪಿ ಗಣಪನ ಮೂರ್ತಿಗಳನ್ನು ಬಳಸು ವುದು ಕಂಡು ಬಂದಿಲ್ಲ. ಹಾಗಿದ್ದರೂ ಸ್ಥಳೀಯಾಡಳಿತ ಈ ಬಗ್ಗೆ ನಿಗಾ ವಹಿಸುತ್ತಿವೆ ಎಂದರು. ಗಣೇಶೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ಬಳಸುವ ವಾಹನಗಳು ಕಾರ್ಯಕ್ಷಮತೆಯನ್ನು ಪ್ರಾದೇಶಿಕ ಸಾರಿಗೆ ಇಲಾಖೆಯವರು ದೃಢೀಕರಿಸಿಕೊಳ್ಳುವಂತೆ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸಲಹೆ ನೀಡಿದರು. ನೇತ್ರಾವತಿ, ಫಲ್ಗುಣಿ ಸೇರಿದಂತೆ ನಾನಾ ನದಿ, ಕೆರೆಗಳಲ್ಲಿ ಗಣಪತಿ ವಿಸರ್ಜನೆ ಮಾಡುವಲ್ಲಿ ಬೋಟ್, ಸುವ್ಯವಸ್ಥಿತ ಲೈಟಿಂಗ್, ಲೈಫ್ ಜಾಕೆಟ್, ಅಗ್ನಿ ಸುರಕ್ಷತೆ ಸೇರಿದಂತೆ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದರು ಈ ಹಿಂದಿನಂತೆಯೇ ದ.ಕ. ಜಿಲ್ಲೆಯಲ್ಲಿ ಶಾಂತಿ ಹಾಗೂ ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಎಲ್ಲರೂ ಸಹಕರಿಸಬೇಕು. ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಗಳಿಗೆ ಏಕಗವಾಕ್ಷಿ(ಸಿಂಗಲ್ ವಿಂಡೋ) ಯಡಿ ಅನುಮತಿ ನೀಡಬೇಕು. ಉತ್ಸವಕ್ಕೆ ಸಂಘಟಕರು ಗ್ರಾಮೀಣ ಭಾಗದಲ್ಲಾದರೆ ಗ್ರಾಮ ಪಂಚಾಯತ್‌ ಅಥವಾ ಸ್ಥಳೀಯ ಸಂಸ್ಥೆಗಳು, ನಗರ ಭಾಗದಲ್ಲಾದರೆ ಮಹಾನಗರಪಾಲಿಕೆಗೆ ಅರ್ಜಿ ಸಲ್ಲಿಸಬೇಕು. ಧ್ವನಿವರ್ಧಕ ಅಳವಡಿಕೆಗೆ ಆಯಾಯ ಪೊಲೀಸ್‌ ಠಾಣೆಗಳು ಅನುಮತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು. ಸಭೆಯಲ್ಲಿ ಜಿಪಂ ಸಿಇಒ ಡಾ. ಆನಂದ್‌, ಮನಪಾ ಆಯುಕ್ತ ಆನಂದ್, ಡಿಸಿಪಿ ಸಿದ್ಧಾರ್ಥ್ ಗೋಯಲ್ ಮತ್ತಿತರರು ಉಪಸ್ಥಿತರಿದ್ದರು.

    Latest Posts

    ನಾಳೆಯ ಕರ್ನಾಟಕ ಬಂದ್ ಗೆ ಕರಾವಳಿಯಿಂದ ಬೆಂಬಲ ಇಲ್ಲ : ದಿಲ್ ರಾಜ್ ಆಳ್ವ

    ಕಾವೇರಿ ನದಿ ನೀರಿನ ಹೋರಾಟ ನಾಳೆ ನಡೆಯಲಿರುವ ಕರ್ನಾಟಕ ಬಂದ್‌ಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್‌ ಮಾಡಿ ಜನರು ಕಾವೇರಿ ಹೋರಾಟಕ್ಕೆ...

    ಉಪ್ಪಿನಂಗಡಿ: 500 ರೂ. ಟಿಕೆಟ್ ಖರೀದಿಸಿದ್ದ ಮೇಸ್ತ್ರಿಗೆ ಒಲಿದ 50 ಲಕ್ಷ ಬಂಪರ್ ಕೇರಳ ಲಾಟರಿ

    ಉಪ್ಪಿನಂಗಡಿಯ ಮೇಸ್ತ್ರಿಯೊಬ್ಬರಿಗೆ ಕೇರಳ ಅದೃಷ್ಟ ಲಾಟರಿ ಒಲಿದಿದೆ. ಕಾನತ್ತೂರು ದೇವಸ್ಥಾನಕ್ಕೆ ತೆರಳಿದ್ದ ವೇಳೆ ಇಳಂತಿಲ ನಿವಾಸಿ ಚಂದ್ರಯ್ಯ ಎಂಬುವವರು 500 ರೂಪಾಯಿಯ ಲಾಟರಿ ಟಿಕೆಟ್ ಖರೀದಿಸಿದ್ದರು. ಈ ಟಿಕೆಟ್‌ ಗೆ...

    ಸುಳ್ಯ : ಕೆವಿಜಿ ಪ್ರಿನ್ಸಿಪಾಲ್ ರಾಮಕೃಷ್ಣ ಕೊಲೆ ಪ್ರಕರಣ- ಕೆ.ವಿ.ಜಿ. ಪುತ್ರ ಡಾ.ರೇಣುಕಾಪ್ರಸಾದ್ ಸಹಿತ 6 ಮಂದಿ ದೋಷಿಗಳು.!

    ಬೆಂಗಳೂರು: 12 ವರ್ಷದ ಹಿಂದೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌  ಪ್ರಾಂಶುಪಾಲರಾಗಿದ್ದ ಎ.ಎಸ್‌ ರಾಮಕೃಷ್ಣ  ಅವರ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಡಾ.ರೇಣುಕಾ ಪ್ರಸಾದ್‌ ...

    ಸೆ.30ರಂದು ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ

    ಮಂಗಳೂರು: ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ನಗರ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶರಣ್ ರಾಜ್ ಕೆ.ಆರ್ ರವರ ಪದಗ್ರಹಣ ಕಾರ್ಯಕ್ರಮ ಸೆ.30 ಶನಿವಾರದಂದು ಬೆಳಗ್ಗೆ11.00 ಗಂಟೆಗೆ ವುಡ್ ಲ್ಯಾಂಡ್...

    Don't Miss

    ಚೈತ್ರಾ ಕುಂದಾಪುರ ಪ್ರಕರಣದ ಸುದ್ದಿ ಪ್ರಕಟಿಸುವಾಗ ಕುಂದಾಪುರ ಹೆಸರು ಬಳಸದಂತೆ ಮಾಧ್ಯಮಗಳಿಗೆ ನಿರ್ಬಂಧ

    ಬೆಂಗಳೂರು : ಎಂಎಲ್ಎ ಟಿಕೆಟ್ ಪ್ರಕರಣದಲ್ಲಿ ಕೋಟಿ ಕೋಟಿ ಹಣ ವಂಚನೆ ಮಾಡಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ ಪ್ರಕರಣದ ವರದಿ ವೇಳೆ ಕುಂದಾಪುರ ಹೆಸರು ಬಳಕೆ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ...

    ನಂತೂರು ಜಂಕ್ಷನ್‌ನಲ್ಲಿದ್ದ ರಸ್ತೆ ಹೊಂಡ ಮುಚ್ಚಿದ ಟ್ರಾಫಿಕ್ ಪೊಲೀಸರು

    ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್‌ನಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟು ಮಾಡುತ್ತಿದ್ದ ಹೊಂಡ ಗುಂಡಿಗಳನ್ನು ಮಂಗಳೂರು ನಗರದ ಪೊಲೀಸ್ ಅಧಿಕಾರಿಗಳು ಸ್ವತಃ ಮುಚ್ಚುವ ಕಾರ್ಯ ಮಾಡಿ...

    ‘ಯಜಮಾನಿ ಮಹಿಳೆ’ಯರೇ ನಿಮಗೆ ಇನ್ನೂ ‘ಗೃಹಲಕ್ಷ್ಮಿ’ ಹಣ ಬಂದಿಲ್ವ? ಇಲ್ಲಿದೆ ಕಾರಣ

    ಬೆಂಗಳೂರು: ರಾಜ್ಯ ಸರ್ಕಾರದಿಂದ ನಾಲ್ಕನೇ ಗ್ಯಾರಂಟಿ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈಗಾಗಲೇ ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳ ಪ್ರೋತ್ಸಾಹ ಹಣವನ್ನು ಯಜಮಾನಿ ಮಹಿಳೆಯರ ಖಾತೆಗೆ 2000 ರೂ ಜಮಾ...

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಲಾರಿ ಚರಂಡಿಗೆ ಪಲ್ಟಿ

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕ ಮತ್ತು ಕ್ಲೀನರ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಮಂಗಳೂರು: ಪುರಭವನದಲ್ಲಿ ಪ್ರಪ್ರಥಮ ಬಾರಿಗೆ ತುಳು ಭಾಗವತಿಕೆ ಸಹಿತ “ಸಿರಿ ದೇವಿ ಮಾತ್ಮೆ” ಎಂಬ ಸಂಪೂರ್ಣ ತುಳು ಯಕ್ಷಗಾನ

    ಮಂಗಳೂರು: ತುಳುವೆರೆ ಆಯನೊ ಕೊಟ ಕುಡ್ಲ (ರಿ.) ವತಿಯಿಂದ ಮಂಗಳೂರು ಪುರಭವನದಲ್ಲಿ ಪ್ರಪ್ರಥಮ ಬಾರಿಗೆ ತುಳು ಭಾಗವತಿಕೆ ಸಹಿತ ಯಕ್ಷಲೋಕದ ನಾಮಾಂಕಿತ ಕಲಾವಿದರ ಸಮಾಗಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸರಪಾಡಿ...