Saturday, April 20, 2024
spot_img
More

    Latest Posts

    5,8 ನೇ ತರಗತಿಗೆ ಬೋರ್ಡ್ ಪರೀಕ್ಷೆ : ಮತ್ತೆ ಮುಂದೂಡಲು ಹೈಕೋರ್ಟ್ ನಕಾರ

    ಬೆಂಗಳೂರು: ರಾಜ್ಯದ 5 ಮತ್ತು 8 ನೇ ತರಗತಿಗಳಿಗೆ ಮಾರ್ಚ್ 27 ರಿಂದ ನಡೆಯಲಿರುವ ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ಮುಂದೂಡಬೇಕೆಂಬ ರಾಜ್ಯ ಖಾಸಗಿ ಅನುದಾನಿತ ರಹಿತ ಶಾಲೆಗಳ ಒಕ್ಕೂಟದ ಮನವಿಯನ್ನು ಹೈಕೋರ್ಟ್ ಮತ್ತೊಮ್ಮೆ ತಿರಸ್ಕರಿಸಿದೆ.

    ಬೋರ್ಡ್ ಪರೀಕ್ಷೆ ನಡೆಸುವ ಕುರಿತಾಗಿ ಹೋರಾಡಿಸಲಾದ ಸುತ್ತೋಲೆ ರದ್ದುಪಡಿಸಿ ಏಕ ಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ಮನವಿ ನ್ಯಾಯಮೂರ್ತಿ ಜಿ ನರೇಂದರ್ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ಪೀಠದ ಮುಂದೆ ವಿಚಾರಣೆ ನಡೆಸಲಾಗಿದ್ದು, ವಿಚಾರಣೆ ವೇಳೆ ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಪರ ವಕೀಲರು ಮೆಮೊ ಸಲ್ಲಿಸಿ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ಮಧ್ಯಂತರ ನಿರ್ದೇಶನದ ಮೇರೆಗೆ 5 ಮತ್ತು 8 ನೇ ತರಗತಿಗೆ ಮಾ. 27 ರಂದು ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ರಾಜ್ಯ ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.

    ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳು ಮತ್ತು ಖಾಸಗಿ ಶಾಲೆಗಳ ಮಕ್ಕಳ ಪೋಷಕರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಅದು ಮಾರ್ಚ್ 27 ರಂದೇ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ಹೀಗಾಗಿ ಪರೀಕ್ಷೆ ಮತ್ತು ವಿಚಾರಣೆ ಒಂದೇ ದಿನ ಇರುವುದರಿಂದ ಪರೀಕ್ಷೆ ಮುಂದೂಡುವಂತೆ ಕೋರಿದ್ದರು.

    ಸುಪ್ರೀಂ ಕೋರ್ಟ್ ಅಂಗಳದಲ್ಲಿ ಇರುವುದರಿಂದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಯಾವುದೇ ತೀರ್ಮಾನ ಕೈಗೊಳ್ಳುವುದಕ್ಕೆ ಅವಕಾಶವಿಲ್ಲ. ಹೀಗಾಗಿ ಪರೀಕ್ಷೆ ಮುಂದೂಡಲು ಸರ್ಕಾರಕ್ಕೆ ನಿರ್ದೇಶನ ನೀಡಲಾಗದು ಎಂದು ಹೈಕೋರ್ಟ್ ಹೇಳಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss