Saturday, October 12, 2024
spot_img
More

    Latest Posts

    ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ನಿಷೇಧಾಜ್ಞೆಯಿಂದ ವಿನಾಯಿತಿ

    ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆ. 14ರ ಮಧ್ಯ ರಾತ್ರಿವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್‌ 144ರಡಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ, ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಗಳಿಗೆ ಈ ನಿಬಂಧನೆಯನ್ನು ಜಿಲ್ಲಾಡಳಿತ ಸಡಿಲಿಸಿದೆ.

    ‘ನಿಷೇಧಾಜ್ಞೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಾರ್ವಜನಿಕರು, ಸಂಘಟನೆಗಳು ಅಥವಾ ರಾಜಕೀಯ ಪಕ್ಷಗಳು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಬಹುದು’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಏರ್ಪಡಿಸುವವರು ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಅನುಮತಿ ಪಡೆಯಬಹುದು. ‘ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯಲ್ಲಿಯೂ ಸಿಆರ್‌ಪಿಸಿ ಸೆಕ್ಷನ್‌ 144ರ ಅಡಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು  ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಬಹುದು’ ಎಂದು ನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss