ಬೆಂಗಳೂರು: ಕೊರೊನಾ ಶೈಕ್ಷಣಿಕ ಕ್ಷೇತ್ರವನ್ನು ಸಾಕಷ್ಟು ಕಾಡಿದೆ. ಕಂಡರಿಯದ ಬದಲಾವಣೆಗಳನ್ನು ತಂದಿದೆ. ಸದ್ಯ ಕೋವಿಡ್ ಕೊಂಚ ಕಂಟ್ರೋಲ್ ಗೆ ಬಂದ ಕಾರಣ ಹಂತ ಹಂತವಾಗಿ ಶಾಲೆ- ಕಾಲೇಜು ತೆರೆಯಲು ತಜ್ಞರ ಸಮಿತಿ ಸಲಹೆ ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ತಜ್ಞರ ಸಮಿತಿಯ ಸಭೆಯ ಬಳಿಕ ಮಾತನಾಡಿದ ಸಿಎಂ, ಕೊವಿಡ್ ನಂತರ ಆರೊಗ್ಯ ಸಮಸ್ಯೆ ಕಡೆಗೆ ಗಮನ ಹರಿಸಬೇಕು. 18 ವರ್ಷಕ್ಕಿಂತ ಹಿರಿಯ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿ ನಂತರ ಕಾಲೇಜು ತೆರೆಯಲು ಸೂಚನೆ ನೀಡಿದ್ದಾರೆ ಎಂದರು.
ಕೋವಿಡ್ ಮೂರನೇ ಅಲೆ ಬಗ್ಗೆ ಚರ್ಚೆ ಮಾಡಲಾಗಿದೆ. ಜಿಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಮಕ್ಕಳ ಘಟಕ ಸ್ಥಾಪನೆ ಮಾಡಲಾಗುವುದು. ಮಾನವ ಸಂಪನ್ಮೂಲ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳು, ಕಾರ್ಪೊರೇಟ್ ಸಂಸ್ಥೆಗಳ ಸಹಭಾಗಿತ್ವಕ್ಕೆ ಸಲಹೆ ನೀಡಲಾಗಿದೆ. ಮಕ್ಕಳ ಮನೋಸ್ಥೈರ್ಯ ಹೆಚ್ಚಿಸಲು ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದರು.
©2021 Tulunada Surya | Developed by CuriousLabs