ಉಡುಪಿ: ಬುಲೆಟ್ ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಪಡುಅಲೆವೂರು ನಿವಾಸಿ ವನಿತಾ (50) ಎಂದು ಗುರುತಿಸಲಾಗಿದೆ.ಡಿ.11ರಂದು ರಾಕೇಶ್ ಭಟ್ ಎಂಬವರು ಬುಲೆಟ್‌ನಲ್ಲಿ ತನ್ನ ತಾಯಿಯನ್ನು ಕರೆದುಕೊಂಡು ಕೃಷ್ಣಮಠಕ್ಕೆ ಕಾರ್ಯಕ್ರಮದ ನಿಮಿತ್ತ ಹೋಗುತ್ತಿದ್ದಾಗ ವಿದ್ಯೋದಯ ಶಾಲೆಯ ಬಳಿ ಹಿಂಬದಿಯಲ್ಲಿದ್ದ ವನಿತಾ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದರೆನ್ನಲಾಗಿದೆ.ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಅವರು, ಡಿ.17ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
