Saturday, June 15, 2024
spot_img
More

  Latest Posts

  ಬೆಳ್ತಂಗಡಿ: ರಸ್ತೆ ದಾಟುವಾಗ ಚರಂಡಿಗೆ ಬಿದ್ದು ವ್ಯಕ್ತಿ ಮೃತ್ಯು

  ಬೆಳ್ತಂಗಡಿ: ತಾಲೂಕಿನ ಇಂದಬೆಟ್ಟು ಎಂಬಲ್ಲಿ ರಸ್ತೆ ದಾಟುತ್ತಿದ್ದಾಗ ಚರಂಡಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಜು.27ರಂದು ರಾತ್ರಿ ನಡೆದಿದೆ. ಮೃತರನ್ನು ಇಂದಬೆಟ್ಟು ಗ್ರಾಮದ ಬರಮೇಲು ನಿವಾಸಿ ಪೂವಪ್ಪ (54) ಎಂದು ಗುರುತಿಸಲಾಗಿದೆ.ಜು.27ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಂಗಡಿಗೆ ತೆರಳಿದ್ದ ಸಂಜೆಯಾದರೂ ಹಿಂದಿರುಗಿ ಬರದಿದ್ದಾಗ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದು, ರಾತ್ರಿ 9 ಗಂಟೆ ಸುಮಾರಿಗೆ ಚರಂಡಿಯಲ್ಲಿ ಪೂವಪ್ಪ ಅವರ ಮೃತದೇಹ ಪತ್ತೆಯಾಗಿದೆ.ಇನ್ನು ಬುಧವಾರ ರಾತ್ರಿ ಧಾರಾಕಾರ ಮಳೆಯಾಗುತ್ತಿದ್ದರಿಂದ ಚರಂಡಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದು ಎಂದು ಕುಟುಂಬಸ್ಥರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss