ಬೆಂಗಳೂರು : ರಾಜ್ಯದ ರೈತರು ಹಾಗೂ ಜನತಗೆ ಇಂಧನ ಸಚಿವ ವಿ.ಸುನಿಲ್ ಕುಮಾರ್ ಸಿಹಿಸುದ್ದಿ ನೀಡಿದ್ದು, ಗೃಹ ಬಳಕೆ ಮತ್ತು ಕೃಷಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಸೂಚನೆ ನೀಡಿದ್ದಾರೆ.
ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವ ಸುನಿಲ್ ಕುಮಾರ್, ಕೃಷಿ ಪಂಪ್ ಸೆಟ್ ಫೀಡರ್ ಗಳಿಗೆ ಹಗಲು ವೇಳೆ ನಿರಂತರ 7 ಗಂಟೆಗಳ ಕಾಲ ಮೂರು ಫೇಸ್ ಹಾಗೂ ಗೃಹ ಬಳಕೆಗೆ ವಿದ್ಯುತ್ ಪೂರೈಕೆ ಮಾಡುವಲ್ಲಿ ಆಗುವ ವ್ಯತ್ಯಯಗಳಿಗೆ ವಲಯ ಮುಖ್ಯ ಎಂಜಿನಿಯರ್ ಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬೇಸಿಗೆ ಕಾಲದಲ್ಲಿ ಮೂರು ತಿಂಗಳು ಕಾಲ ಗೃಹ, ವಾಣಿಜ್ಯ, ಕೈಗಾರಿಕೆ ಬಳಕೆ ಹಾಗೂ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆಗೆ ಸಂಬಂಧಪಟ್ಟಂತೆ ಹೆಚ್ಚು ದೂರುಗಳು ಬರುತ್ತಿದ್ದು, ಸಮಸ್ಯೆಗಳಿಗೆ ವಲಯ ಇಂಜಿನಿಯರ್ ಗಳನ್ನು ಹೊಣೆ ಮಾಡಲಾಗುವುದು. ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿ ರೈತರು, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ.