ತುಮಕೂರು : ವಸತಿ ಶಾಲಾ ಮಕ್ಕಳ ಮೇಲೆ ಶಾಲಾ ಕಾರ್ಯದರ್ಶಿ ಪುತ್ರನಿಂದ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ತುಮಕೂರು ತಾಲೂಕಿನ ಮಲ್ಲಸಂದ್ರದ ವಿಶ್ವಭಾರತಿ ಸರ್ಕಾರಿ ಅನುದಾನಿತ ಶಾಲೆಯಲ್ಲಿ ನಡೆದಿದೆ.
ತುಮಕೂರು ತಾಲೂಕಿನ ಮಲ್ಲಸಂದ್ರ ವಸತಿ ಶಾಲೆಯಲ್ಲಿ ಶಾಲೆಯ ಕಾರ್ಯದರ್ಶಿ ಎನ್ ಮೂರ್ತಿ ಅವರ ಪುತ್ರ ಭರತ್ ಕುಡಿದ ಮತ್ತಿನಲ್ಲಿ ಶಾಲಾ ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಕುಡಿದು ಮತ್ತಿನಲ್ಲಿ ಬೆಲ್ಟ್ ಹಾಗೂ ದೊಣ್ಣೆಗಳಿಂದ ವಸತಿ ಶಾಲೆಯ 40 ಕ್ಕೂ ಹೆಚ್ಚು ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ. ವಿಶ್ವಭಾರತಿ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಘಟನೆ ನಡೆದಿದ್ದು, ಘಟನೆಯನ್ನು ಶಾಲಾ ಆಡಳಿತ ಮಂಡಳಿ ಮುಚ್ಚಿಟ್ಟಿತ್ತು. ಬಳಿಕ ಮಕ್ಕಳು ತಮ್ಮ ಪೋಷಕರಿಗೆ ಹಲ್ಲೆ ಮಾಡಿರುವ ವಿಚಾರ ತಿಳಿಸಿದ್ದು, ಪೋಷಕರು ಹಲ್ಲೆ ಮಾಡಿದ ಭರತ್ ವಿರುದ್ಧ ದೂರು ದಾಖಲಿಸಿದ್ದಾರೆ. ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಭರತ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
