ಸುಳ್ಯ: ಕಾಲೇಜು ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದನ್ನು ಆಕ್ಷೇಪಿಸಿದ ಬಳಿಕವೂ ಮಾತು ಮುಂದುವರೆಸಿದ್ದಾನೆಂದು ಇನ್ನೊಂದು ಕಾಲೇಜಿನ ವಿದ್ಯಾರ್ಥಿಗಳ ತಂಡ ಗಂಭೀರ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದಿದೆ.
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯೊಬ್ಬಳೊಂದಿಗೆ ಮಾತನಾಡುತ್ತಿದ್ದನೆಂಬ ವಿಚಾರಕ್ಕೆ ಸಂಬಂಧಿಸಿ ಈ ಹಿಂದೆ ಆತನಿಗೆ ಎಚ್ಚರಿಕೆ ಕೊಡಲಾಗಿತ್ತು ಎನ್ನಲಾಗಿದೆ. ಆದರೂ ಆತ ಮತ್ತೆ ಮಾತು ಮುಂದುವರಿಸಿದ್ದನೆಂದೂ ಇದನ್ನು ತಿಳಿದ ಈ ಹಿಂದೆ ಎಚ್ಚರಿಕೆ ನೀಡಿದ ಆ ಯುವಕರು ಮಂಗಳವಾರ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ತನಿಖೆ ಆರಂಭಿಸಿದ್ದಾರೆ.
