Monday, May 27, 2024
spot_img
More

  Latest Posts

  ಬಂಟವಾಳದ ಬಂಟರ ಭವನದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ನಡೆದ ಐದನೇ ಪೂರ್ವಭಾವಿ ಸಭೆ

  ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮಗಳ ಕುರಿತ ಐದನೇ ಪೂರ್ವಭಾವಿ ಸಭೆಯು ದಿನಾಂಕ 24/09/2023 ರಂದು ಬಂಟವಾಳದ ಬಂಟರ ಭವನದ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಎಲ್ಲಾ ಸದಸ್ಯರ ಸಮ್ಮುಖದಲ್ಲಿ ಕಾರ್ಯಕ್ರಮದ ಕರಪತ್ರವನ್ನು ಅನಾವರಣಗೊಳಿಸಲಾಯಿತು.


  ಸಭೆಯಲ್ಲಿ ತುಳುನಾಡಿನ ಪ್ರತಿಷ್ಠಿತ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಇವರನ್ನು ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ನೂತನ ಪೋಷಕರಾಗಿ ಸೇರ್ಪಡೆಯಾದ ಶ್ರೀ ಸುಧಾಕರ್ ಪೂಂಜ, ಶ್ರೀ ಜಗನ್ನಾಥ್ ಚೌಟ,ಶ್ರೀ ಲೋಕೇಶ್ ಶೆಟ್ಟಿ ಮತ್ತು ಶ್ರೀ ಸುರೇಶ್ ರೈ ಮಕರಜ್ಯೋತಿ ಇವರುಗಳನ್ನು ಗೌರವಿಸಿ ಸನ್ಮಾನಿಸಲಾಯಿತು.


  ಈ ಸಂದರ್ಭದಲ್ಲಿ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿ ಹಾಗೂ ಉಪಾಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ್ ಶೆಟ್ಟಿಯವರನ್ನು ಬಂಟರ ಸಂಘ ಬಂಟ್ವಾಳ ತಾಲೂಕಿನ ಅಧ್ಯಕ್ಷ ಹಾಗೂ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಶ್ರೀ ಚಂದ್ರಹಾಸ್ ಡಿ. ಶೆಟ್ಟಿ ರಂಗೋಲಿ ಹಾಗೂ ಕಾರ್ಯದರ್ಶಿ ಶ್ರೀ ಜಗನ್ನಾಥ್ ಚೌಟರು ಪ್ರಿತಿಪೂರ್ವಕವಾಗಿ ಸನ್ಮಾನಿಸಿದರು.
  ಈ ಸಂದರ್ಭದಲ್ಲಿ ಶ್ರೀ ಕರ್ನೂರು ಮೋಹನ್ ರೈ ಸಹ ಸಂಚಾಲಕರು ಸಾಂಸ್ಕೃತಿಕ ಸಮಿತಿ, ಶ್ರೀ ರೋಷನ್ ಕುಮಾರ್ ಶೆಟ್ಟಿ ಸಹ ಸಂಚಾಲಕರು ಕ್ರೀಡಾ ಸಮಿತಿ, ಮಹಿಳಾ ವಿಭಾಗದ ಸದಸ್ಯರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss