Wednesday, February 28, 2024
spot_img
More

  Latest Posts

  ಮಾಣಿಯಲ್ಲಿ ನಡೆದ ಘಟನೆಯಲ್ಲಿ ತಲವಾರು ದಾಳಿ ನಡೆದಿಲ್ಲ.. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಬೇಡಿ -ಪೊಲೀಸ್ ಇಲಾಖೆ ಸ್ಪಷ್ಟನೆ

  ಮಾಣಿ : ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾಣಿಯಲ್ಲಿ ಜಗಳ ನಡೆದಿದ್ದು, ಈ ಘಟನೆಯಲ್ಲಿ ತಲವಾರು ದಾಳಿಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.

  ಮಾಣಿಯಲ್ಲಿ ನಡೆದ ಪ್ರಕರಣದಲ್ಲಿ ತಲವಾರಿನಿಂದ ಹಲ್ಲೆ ನಡೆಸಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದ್ದು, ಸದರಿ ಗಲಾಟೆಯಲ್ಲಿ ಕಟ್ಟಿಗೆಯಿಂದ ಹಲ್ಲೆ ನಡೆಸಿರುವುದಾಗಿದೆ. ಪ್ರಸ್ತುತ ತನಿಖೆ ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿ ನೀಡಲಾಗುವುದು.

  ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಕಟ್ಟಿಗೆಯಿಂದ ಹಲ್ಲೆ ಮಾಡಲಾಗಿದೆ. ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತಲ್ವಾರ್ ನಿಂದ ಹಲ್ಲೆ ಅಂತ ಸುದ್ದಿ ಹಾಕಲಾಗಿದೆ. ದಯವಿಟ್ಟು ಅದನ್ನು ಸರಿಪಡಿಸಿ.., ಕಟ್ಟಿಗೆಯಿಂದ ಹಲ್ಲೆ ಆಗಿರುವ ಬಗ್ಗೆ ಸ್ಪಷ್ಟಿಕರಣ ನೀಡುತ್ತಿದ್ದೇವೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss