ಬೆಂಗಳೂರು: ಕೆಟ್ಟು ನಿಂತಿದ್ದ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಶಿವಾಜಿ ನಗರದ ಕ್ವೀನ್ಸ್ ರಸ್ತೆಯಲ್ಲಿ ತಡರಾತ್ರಿ ಘಟನೆ ನೆಡೆದಿದೆ. ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
ಶಿವಾಜಿನಗರ ಪೊಲೀಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.ವಾಹನದ ಅಕ್ಕಪಕ್ಕ ಯಾವುದೇ ವಾಹನಗಳಿಲ್ಲದ ಕಾರಣ ಅನಾಹುತ ತಪ್ಪಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.