Tuesday, June 25, 2024
spot_img
More

  Latest Posts

  ಹೆಬ್ರಿ:ಕಸ ಕಡ್ಡಿಗಳಿಗೆ ಬೆಂಕಿ ಹಚ್ಚಲು ಹೋಗಿ ಗಾಯಗೊಂಡ ಮಕ್ಕಳು….!!

  ಉಡುಪಿ : ಅಗ್ನಿ ಅವಘಡದಿಂದಾಗಿ ನಾಲ್ವರು ವಿಧ್ಯಾರ್ಥಿಗಳಿಗೆ ತೀವ್ರ ಸ್ವರೂಪದ ಗಾಯಗೊಂಡ ಘಟನೆ ಹೆಬ್ರಿಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ನವೆಂಬರ್ 9 ರಂದು ನಡೆದಿದೆ.

  ಹಾಸ್ಟೆಲ್ ನ ಹಿಂಭಾಗದಲ್ಲಿ ಕಸ ಕಡ್ಡಿಗಳಿಗೆ ಸ್ಯಾನಿಟೈಸರ್ ಮೂಲಕ ಬೆಂಕಿ ಹಚ್ಚುವ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ನಾಲ್ಕನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀನಿವಾಸ್, ಅಮರೇಶ್ ಹಾಗೂ ಐದನೇ ತರಗತಿಯ ವಿದ್ಯಾರ್ಥಿಗಳಾದ ವಿನೋದ್ ಮತ್ತು ಮನೋಜ್ ಗಾಯಗೊಂಡವರು. ಮೂವರು ವಿದ್ಯಾರ್ಥಿಗಳು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಹಾಗೂ ಓರ್ವ ವಿದ್ಯಾರ್ಥಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  ಘಟನೆಯ ಮರುದಿನ ಹೆಬ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಗುರುವಾರ ಸಂಜೆ ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು ಭೇಟಿ ನೀಡಿ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss