ಉಡುಪಿ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಕಾಲಿಗೆ ಬಲೆ ಸಿಲುಕಿ ಮೀನುಗಾರ ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.
ಮೃತ ಮೀನುಗಾರನನ್ನು ಶಿರೂರು ಆಳ್ವಗದ್ದೆ ನಿವಾಸಿ ನಾಗರಾಜ ಮೊಗೇರ ಎಂದು ಗುರುತಿಸಲಾಗಿದೆ.
ಈತ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಕಾಲಿಗೆ ಮೀನಿನ ಬಲೆ ಸಿಲುಕಿದ ಪರಿಣಾಮ ಆಯತಪ್ಪಿ ಸಮುದ್ರ ನೀರಿಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮೃತದೇಹವನ್ನು ಬೋಟ್ ಮೂಲಕ ಮೇಲಕ್ಕೆತ್ತಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ವಾರಿಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದುಬಂದಿದೆ.