ಮಂಗಳೂರು : ಮಂಗಳೂರಿನ ಸುರತ್ಕಲ್ ನ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಐವರನ್ನು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಫಾಜಿಲ್ ಮೇಲೆ ದಾಳಿ ವೇಳೆ ಬಳಸಿದ್ದ ಕಾರು ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕ ಅಜಿತ್ ಡಿಸೋಜಾನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಫಾಜಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಘಟನೆ ಸಂಬಂಧ ಇದೀಗ ಹಂತಕರು ಬಳಸಿದ್ದ ಕಾರು ಪತ್ತೆಯಾಗಿದ್ದು, ಕಾರು ಮತ್ತು ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಚುರುಕುಗೊಳಿಸಿದ್ದಾರೆ.