Friday, March 29, 2024
spot_img
More

    Latest Posts

    ಉಡುಪಿ: ಜಿಲ್ಲೆಯಲ್ಲಿ ಆಗಸ್ಟ್ 13ರಿಂದ 15ರವರೆಗೆ ಪ್ರತೀ ಮನೆಯಲ್ಲೂ ತ್ರಿವರ್ಣ ಧ್ವಜ ಅಭಿಯಾನ

    ಉಡುಪಿ: ದೇಶದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಸಾರ್ವಜನಿಕರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಭಕ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ಪ್ರತೀ ಮನೆಯಲ್ಲೂ ತ್ರಿವರ್ಣ ಧ್ವಜ (ಹರ್‌ಘರ್ ತಿರಂಗಾ) ಅಭಿಯಾನವನ್ನು ಜಿಲ್ಲೆಯಲ್ಲಿ ಆಗಸ್ಟ್ 13ರಿಂದ 15ರವರೆಗೆ ಆಯೋಜಿಸಲು ಅಗತ್ಯವಿರುವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ನಿರ್ದೇಶನ ನೀಡಿದ್ದಾರೆ.

    ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯ ಪ್ರತೀ ಮನೆಯಲ್ಲೂ ತ್ರಿವರ್ಣ ಧ್ವಜ (ಹರ್‌ಘ‌ರ್ ತಿರಂಗಾ) ಅಭಿಯಾನ ಆಯೋಜಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಆಗಸ್ಟ್ 13ರಿಂದ 15ರವರೆಗೆ ಜಿಲ್ಲೆಯ ಎಲ್ಲಾ ಮನೆಗಳು, ಸರಕಾರಿ ಕಟ್ಟಡಗಳು, ಬಹುಮಹಡಿ ಕಟ್ಟಡಗಳು, ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು, ಸಂಘ ಸಂಸ್ಥೆಗಳು, ವಸತಿ ಸಮುಚ್ಛಯಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಕುರಿತಂತೆ ಜಾಗೃತಿ ಮೂಡಿಸಲು ನಗರ ಪ್ರದೇಶದಲ್ಲಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ನೌಕರರು, ಆಶಾ, ಅಂಗನವಾಡಿ ಕಾರ್ಯಕರ್ತರು, ಸ್ವಸಹಾಯ ಸಂಘದ ಪ್ರತಿನಿಧಿಗಳ ಮೂಲಕ ಪ್ರಚಾರ ಅಭಿಯಾನ ನಡೆಸುವಂತೆ ಅವರು ಸೂಚನೆ ನೀಡಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss