Tuesday, September 17, 2024
spot_img
More

    Latest Posts

    ಕಡಬ: ಕಾಡಾನೆ ದಾಳಿ ಶಂಕೆ – ಹಸು ಸಾವು

    ಕಡಬ: ಮೇಯಲು ಬಿಟ್ಟಿದ್ದ ದನವೊಂದು ತೋಟದಲ್ಲಿ ಗಾಯಗೊಂಡು ಮೃತಪಟ್ಟಿದ್ದು, ಆನೆ ದಾಳಿ ನಡೆಸಿದ ಬಗ್ಗೆ ಸಂಶಯ ವ್ಯಕ್ತವಾಗಿದೆ.

    ಕಡಬ ತಾಲೂಕು ಕೊಣಾಜೆ ದೊಡ್ಡಮನೆ ನಿವಾಸಿ ಅಶೋಕ್ ಎಂಬವರಿಗೆ ಸೇರಿದ ದನವನ್ನು ಮಂಗಳವಾರ ಮೇಯಲು ಬಿಡಲಾಗಿತ್ತು. ಸಂಜೆ ವೇಳೆಗೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ. ಬುಧವಾರ ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ ತೋಟದಲ್ಲಿ ಗಾಯಗೊಂಡು ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಟದಲ್ಲಿ ನೀರಾವರಿ ಪೈಪ್ ಗಳಿಗೆ ಹಾನಿಯಾಗಿದ್ದು, ರಾತ್ರಿ ವೇಳೆ ಆನೆ ಬಂದಿರುವ ಬಗ್ಗೆ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss