Thursday, April 18, 2024
spot_img
More

    Latest Posts

    ಮಾಜಿ ಕಂಬಳ ಓಟಗಾರ, ಧಾರ್ಮಿಕ, ಸಹಕಾರಿ ಮುಂದಾಳು ಉಳಿಗ್ರಾಮದ ಕಕ್ಯಪದವು, ಕಿಂಜಾಲು ನಿವಾಸಿ ಜಯ ಶೆಟ್ಟಿ ನಿಧನ

    ಬಂಟ್ವಾಳ: ಮಾಜಿ ಕಂಬಳ ಓಟಗಾರ, ಧಾರ್ಮಿಕ, ಸಹಕಾರಿ ಮುಂದಾಳು ಉಳಿಗ್ರಾಮದ ಕಕ್ಯಪದವು, ಕಿಂಜಾಲು ನಿವಾಸಿ ಜಯ ಶೆಟ್ಟಿ ಕಿಂಜಾಲು(69) ಅವರು ಅಸೌಖ್ಯದಿಂದ ಜೂ.27ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ಜಯ ಶೆಟ್ಟಿ ಅವರು ಉತ್ತಮ ಕೃಷಿ ಸಾಧನೆ ಮಾಡಿದ್ದರು.

    ಕಂಬಳಕ್ಷೇತ್ರದಲ್ಲಿ ಓಟಗಾರರರಾಗಿ ಪ್ರಖ್ಯಾತಿ ಪಡೆದಿದ್ದ ಅವರು ಕಂಬಳ ಕ್ಷೇತ್ರದ ಅದ್ವಿತೀಯ ಸಾಧನೆಗಾಗಿ ಹಲವಾರು ಪ್ರಶಸ್ತಿ, ಸಮ್ಮಾನ ಪಡೆದಿದ್ದರು.ಸುಮಾರು 70ರ ದಶಕದ ಆರಂಭದಲ್ಲಿ ಕಕ್ಯಪದವು ಡೀಕಯ್ಯ ಪೂಜಾರಿ, ಪುಣ್ಕೆದಡಿ ಅಣ್ಣು ಭಂಡಾರಿ ಅವರ ಕೋಣಗಳನ್ನು ಓಡಿಸುತ್ತಿದ್ದ ಅವರು ಬಳಿಕ ಕಾಡಬೆಟ್ಟು ದಿ.ನಾರಾಯಣ ರೈಅವರ ಕೋಣಗಳನ್ನು ಹಗ್ಗ ಹಿರಿಯ ವಿಭಾಗದಲ್ಲಿ ಓಡಿಸುತ್ತಿದ್ದು, ಸುಮಾರು ಒಂದೂವರೆ ದಶಕಗಳ ಕಾಲ ನಿರಂತರ ಪದಕ ಪಡೆದು ನಂಬರ್ ಒನ್ ಸ್ಥಾನದಲ್ಲಿ ವಿರಾಜಿಸಿದ್ದರು.ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss