Thursday, October 10, 2024
spot_img
More

    Latest Posts

    ಉಳ್ಳಾಲ: ಸೋಮೇಶ್ವರ ಬೀಚ್ ಬಳಿ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಪ್ರಕರಣ- ನಾಲ್ವರ ಬಂಧನ

    ಉಳ್ಳಾಲ:ಸೋಮೇಶ್ವರ ಬೀಚ್ ಬಳಿ ಮೂವರು ಕಾಲೇಜು ವಿಧ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ತಂಡದಲ್ಲಿದ್ದ ನಾಲ್ವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್,ತಲಪಾಡಿ ನಿವಾಸಿ ಮೋಕ್ಷಿತ್, ಸುಹಾನ್ ಬಂಧಿತರು.

    ನಿನ್ನೆ ಮಂಗಳೂರಿ‌ನ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾದ ಚೆರ್ಕಳದ ಜಾಫರ್ ಶರೀಫ್ ಹಾಗೂ ಮಂಜೇಶ್ವರ ಮೂಲದ ಮುಜೀಬ್, ಆಶಿಕ್ ಸೋಮೇಶ್ವರ ಸಮುದ್ರ ತೀರಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು.ಇವರ ಜೊತೆ ಮೂವರು ವಿದ್ಯಾರ್ಥಿನಿಯರು ಕೂಡ ಇದ್ದರು ಎನ್ನಲಾಗಿದೆ.

    ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಹಿಂಬಾಲಿಸಿ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿತ್ತು.ವಿದ್ಯಾರ್ಥಿಗಳು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿದ್ದರು.ಪ್ರಕರಣದ ವಿಚಾರಣೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ಇದೀಗ ಪೊಲೀಸರ ತಂಡ ನಾಲ್ವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss