Saturday, May 25, 2024
spot_img
More

  Latest Posts

  ಉಳ್ಳಾಲ: ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ

  ಉಳ್ಳಾಲ: ಕಾರು ಚಾಲಕನೋರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಲಾರಿಗೆ ಗುದ್ದಿ, ಅದರ ಹಿಂಭಾಗದ ವ್ಯಾಗನಾರ್ ಕಾರು ಗುದ್ದಿ, ಅದಕ್ಕೆ ಬಸ್ಸು ಗುದ್ದಿದ ಪರಿಣಾಮ ಸರಣಿ ಅಪಘಾತ ಸಂಭವಿಸಿ ಹಲವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ರಾ.ಹೆ. 66ರ ಜೆಪ್ಪುವಿನ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಮೀಪದಲ್ಲಿ ಸಂಭವಿಸಿದೆ.

  ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸಿಯಾಝ್ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ್ದಾರೆ. ಈ ಪರಿಣಾಮ ಹಿಂಬದಿಯಲ್ಲಿದ್ದ ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ.

  ಅದೇ ವೇಳೆ ಲಾರಿ ಹಿಂಭಾಗದಲ್ಲಿದ್ದ ವ್ಯಾಗನಾರ್ ಕಾರು ಲಾರಿಗೆ ಢಿಕ್ಕಿ ಹೊಡೆಯುವ ಸಂದರ್ಭದಲ್ಲಿಯೇ ಅದರ ಹಿಂಭಾಗದಲ್ಲಿದ್ದ ಕೇರಳ ಸಾರಿಗೆ ಬಸ್ಸು ವ್ಯಾಗನಾರ್ ಕಾರಿಗೆ ಢಿಕ್ಕಿ ಹೊಡೆದಿದೆ.

  ಘಟನೆಯಲ್ಲಿ ಲಾರಿ ಹಾಗೂ ಬಸ್ ನಡುವೆ ಸಿಲುಕಿದ ವ್ಯಾಗನಾರ್ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಅಪ್ಪಚ್ಚಿಯಾಗಿದೆ. ಉಳಿದ ವಾಹನಗಳ ಹಿಂಭಾಗಕ್ಕೆ ಹಾನಿಯಾಗಿದೆ.

  ವ್ಯಾಗನಾರ್ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಆತ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾನೆ.ಎಲ್ಲಾ ವಾಹನಗಳಲ್ಲಿದ್ದ ಐದು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss