ಉಡುಪಿ, ಅ. 11: ತುಳುನಾಡ ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಅವರ ಹುಟ್ಟುಹಬ್ಬವನ್ನು ಅ. 11ರಂದು ಉಡುಪಿಯ ವೇದಿಕೆಯ ಜಿಲ್ಲಾ ಕಚೇರಿಯಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಮಾತನಾಡಿ, ಫ್ರ್ಯಾಂಕಿ ಡಿಸೋಜ ಅವರು ಸಂಘಟನೆಯ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದರೊಂದಿಗೆ ಜನಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘಟನೆಯ ಉದ್ದೇಶ ಕೇವಲ ಸಂಘಟನೆಯನ್ನು ಬೆಳೆಸುವುದಕ್ಕೆ ಸೀಮಿತವಾಗಿರಬಾರದು. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು, ಸಮಾಜದ ವಿವಿಧ ವರ್ಗಗಳ ಸಂಕಷ್ಟಗಳಿಗೆ ಧ್ವನಿಯಾಗುವುದು ಹಾಗೂ ಅಗತ್ಯವಿರುವವರಿಗೆ ನೆರವಾಗುವುದು ಪ್ರತಿಯೊಂದು ಸಂಘಟನೆಯ ಪ್ರಮುಖ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಜನರ ವಿಶ್ವಾಸ ಗಳಿಸಬೇಕು ಎಂದು ಅವರು ಹೇಳಿದರು.
ಫ್ರ್ಯಾಂಕಿ ಡಿಸೋಜ ಅವರು ಸಂಘಟನೆಯ ಚಟುವಟಿಕೆಗಳಲ್ಲಿ ತೋರುತ್ತಿರುವ ಆಸಕ್ತಿ, ಸೇವಾ ಮನೋಭಾವ ಮತ್ತು ಸಂಘಟನೆಯ ಮೇಲಿನ ಬದ್ಧತೆ ಇತರರಿಗೂ ಪ್ರೇರಣೆಯಾಗಲಿ. ಉಡುಪಿ ಜಿಲ್ಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯನ್ನು ಇನ್ನಷ್ಟು ಬಲಪಡಿಸುವುದರೊಂದಿಗೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯವನ್ನು ಮುಂದುವರಿಸಲಿ ಎಂದು ಹಾರೈಸಿದರು.
ಗಣ್ಯರಿಂದ ಶುಭಾಶಯ
ಕಾರ್ಯಕ್ರಮದಲ್ಲಿ ವೇದಿಕೆಯ ದುಬೈ ಘಟಕ ಅದ್ಯಕ್ಷರಾದ ಅಶೋಕ ಬೈಲೂರು, ಕೇಂದ್ರಿಯ ಮಂಡಳಿ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ, ಮಹಿಳಾ ಘಟಕದ ಜಿಲ್ಲಾದ್ಯಕ್ಷೆ ನಾಗಲಕ್ಷ್ಮಿ ಸುಬ್ರಹ್ಮಣ್ಯ ನಗರ, ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮೀನಗರ, ಜಿಲ್ಲಾ ಉಪಾಧ್ಯಕ್ಷ ಮನೋಜ್, ಕಾಪು ಘಟಕದ ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ ಹಾಗೂ ಕಾಪು ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಅನುಸೂಯ ಶೆಟ್ಟಿ ಮತ್ತಿತ್ತರ ಮುಖಂಡರುಗಳು ಫ್ರ್ಯಾಂಕಿ ಡಿಸೋಜ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿ ಸಂಘಟನೆಯ ವಿವಿಧ ಘಟಕಗಳನ್ನು ಒಗ್ಗೂಡಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವುದು ಹಾಗೂ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವುದು ಸಂಘಟನೆಯ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಫ್ರ್ಯಾಂಕಿ ಡಿಸೋಜ ಅವರು ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ಹೆಚ್ಚಿನ ಉತ್ಸಾಹದೊಂದಿಗೆ ಸಮಾಜಸೇವೆಯಲ್ಲಿ ಮುಂದುವರಿಯಲಿ ಎಂದು ಹಾರೈಸಿದರು.
ಕೇಕ್ ಕತ್ತರಿಸಿ ಸಂಭ್ರಮ
ಸಭೆಯ ಬಳಿಕ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಫ್ರ್ಯಾಂಕಿ ಡಿಸೋಜ ಅವರು ಶುಭಾಶಯ ಕೋರಿದ ಸಂಘಟನೆಯ ಸ್ಥಾಪಕ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಎಲ್ಲರ ಸಹಕಾರದೊಂದಿಗೆ ಸಂಘಟನೆಯ ಸಮಾಜಮುಖಿ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಜಿಲ್ಲಾ ಉಪಾಧ್ಯಕ್ಷೆ ಗಾಯತ್ರಿ, ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪವಿತ್ರ, ಸಂಘಟನಾ ಕಾರ್ಯದರ್ಶಿ ಶಂಕರ, ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ರೋಷನ್ ಡಿಸೋಜ, ರಾಜೇಶ್ವರಿ, ಹರಿಣಾಕ್ಷಿ, ವಿನೋದಾ, ಗುಲಾಬಿ, ಪುಷ್ಪ, ಜ್ಯೋತಿ, ಬೈರಂಪಳ್ಳಿ ಘಟಕದ ಪ್ರಧಾನ ಕಾರ್ಯದರ್ಶಿ ನಿಶಿತ್ ಪೂಜಾರಿ ಮುಟ್ಟಿಕಲ್ಲು, ರಂಜಿತ್ ಕುಲಾಲ್ ಶಿರೂರು, ಸಚಿನ್ ಕುಮಾರ್ ಶೆಟ್ಟಿ, ಅಜಯ್ ಕುಲಾಲ್ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

