Tuesday, October 22, 2024
spot_img
More

    Latest Posts

    ಸ್ವ-ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ವಿವಿಧ ‘ಉಚಿತ ತರಬೇತಿ’ಗೆಳಿಗೆ ಅರ್ಜಿ ಆಹ್ವಾನ

    ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ರುಡ್ ಸೆಟ್ ಸಂಸ್ಥೆಯ ಮೂಲಕ ವಿವಿಧ ಉಚಿತ ತರಬೇತಿಗಳನ್ನು ಸ್ವ-ಉದ್ಯೋಗಾಕಾಂಕ್ಷಿಗಳಿಗೆ ನೀಡಲಾಗುತ್ತಿದೆ. ಇದೀಗ ವಿವಿಧ ಕೋರ್ಸ್ ಗಳಿಗೆ ಉಚಿತ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಈ ಕುರಿತಂತೆ ರುಡ್ ಸೆಟ್ ಸಂಸ್ಥೆಯಿಂದ ಮಾಹಿತಿ ನೀಡಲಾಗಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ, ಎಸ್‌ ಡಿಎಮ್‌ಇ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಜೊತೆಯಾಗಿ ಸ್ಥಾಪಿಸಿರುವ ರುಡ್‌ಸೆಟ್ ಸಂಸ್ಥೆ ಇದೀಗ ದೇಶಾದ್ಯಂತ ಇರುವ ನಿರುದ್ಯೋಗ ಯುವಕ ಯುವತಿಯರಿಗೆ ಮತ್ತು ಉದ್ಯೋಗವನ್ನು ಅರಸುತ್ತಿರುವವರಿಗೆ, ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಆಶಾ ಕಿರಣವಾಗಿದೆ ಎಂದಿದೆ.

    ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕಾಗಿ ಅನುಕರಣೀಯ ಮಾದರಿ ಎಂದು ಗುರಿತಿಸಲ್ಪಟ್ಟು ದೇಶದ ಪ್ರತಿ ಜಿಲ್ಲೆಯಲ್ಲೂ ವಿವಿಧ ಬ್ಯಾಂಕುಗಳಿಂದ ರುಡ್‌ಸೆಟ್ ಮಾದರಿ ಸಂಸ್ಥೆಗಳನ್ನು ಸ್ಥಾಪಿಸಿ ಇಂದು ಅನೇಕ ಯುವ ಜನರು ಸ್ವ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸಿರುತ್ತದೆ. ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದಿದೆ.

    ಈ ಕೆಳಕಂಡ ವಿವಿಧ ಉಚಿತ ತರಬೇತಿಗೆ ಅರ್ಜಿ ಆಹ್ವಾನ

    1. ಕೃತಕ ಆಭರಣಗಳ ತಯಾರಿಕೆ – ದಿನಾಂಕ 18.12.2023 80 30.12.2023 (13 ದಿನ)
    2. ಮೋಟಾರ್ ರಿವೈಂಡಿಂಗ್ – ದಿನಾಂಕ 04.01.2024 ರಿಂದ 02.02.2024ರವರೆಗೆ (30 ದಿನಗಳು)
    3. ಜೇನು ಸಾಕಾಣಿಕೆ – 04 08.01.2024 80 17.01.202483 (10 )
    4. ಎಸಿ ಮತ್ತು ಫ್ರಿಡ್ಜ್ ರಿಪೇರಿ – 0 19.01.2024 80 17.02.20248 (30 ದಿನ)
    5. ಗ್ರಾಮೀಣ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ದಿನಾಂಕ 05.02.2024 ರಿಂದ 17.02.2024ರವರೆಗೆ (13 ದಿನಗಳು)

    ಈ ತರಬೇತಿಗಳು ನಡೆಯಲಿದೆ ಜೊತೆಗೆ ಮುಂದಿನ ದಿನಗಳಲ್ಲಿ ಕೃಷಿ ಉದ್ಯಮಿ, ಮೊಬೈಲ್ ಫೋನ್ ರಿಪೇರಿ, ಮೆನ್ಸ್ ಪಾರ್ಲರ್, ಮೋದಲಾದ ತರಬೇತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

    ಈ ಎಲ್ಲಾ ತರಬೇತಿಗಳು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು 18 ರಿಂದ 45 ವರ್ಷಗಳ ವಯೋಮಿತಿಯ ಕನ್ನಡ ಓದು ಬರಹ ಬಲ್ಲ ಯುವಕ/ಯುವತಿಯರು ರುಡ್ ಸೆಟ್ ಸಂಸ್ಥೆಯ email – ujirerudseti@gmail.com ಗೆ ಸಲ್ಲಿಸಬಹುದು, ವಾಟ್ಸಪ್ ಮೂಲಕ ಅರ್ಜಿ ಸಲ್ಲಿಸುವವರು ಮೊಬೈಲ್ ನಂ. 6364561982 ಗೆ ಸಲ್ಲಿಸಬಹುದು.

    ನೇರವಾಗಿ ಕೂಡ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಬಿಳಿ ಹಾಳೆಯಲ್ಲಿ ಅರ್ಜಿಯನ್ನು ಬರೆದು ನಿರ್ದೇಶಕರು ರುಡ್‌ಸೆಟ್ ಸಂಸ್ಥೆ, ಸಿದ್ದವನ ಉಜಿರೆ 574240, ಇವರಿಗೆ ಕಳ್ಳಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 9591044014, 9902594791 ದೂರವಾಣಿ ಸಂಖ್ಯೆ 08256-236404, ಅಥವಾhttps://forms.gle/Z2xPLEIFigamcMBd9ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss