ಬೆಂಗಳೂರು: ನಿನ್ನೆ ಸುರಿದಂತ ಭಾರೀ ಮಳೆಯಿಂದಾಗಿ ( Heavy Rain ) ಬೆಂಗಳೂರಿನಲ್ಲಿ ಜಲಪ್ರಳಯವೇ ಉಂಟಾಗಿದೆ. ಹೀಗಿರುವಾಗಲೇ ಮತ್ತೆ ಮುಂದಿನ ಐದು ದಿನಗಳು ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನು ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಎ ಪ್ರಸಾದ್ ಮಾಹಿತಿ ನೀಡಿದ್ದು, ಇಂದಿನಿಂದ ಮುಂದಿನ ಐದು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ. 2 ದಿನ ಸಾಧಾರಣ ಮಳೆಯಾಗೋ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿಯೂ ನಾಲ್ಕು ದಿನ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ. ತಮಿಳುನಾಡಿನ ಭಾಗಗಳಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಸಹಿತ, ರಾಜ್ಯಾಧ್ಯಂತ ಇಂದಿನಿಂದ ಐದು ದಿನ ಭಾರೀ ಮಳೆಯ ಮುನ್ಸೂಚನೆ ನೀಡಿದ್ದಾರೆ.

