ಮಂಗಳೂರು: ವಿದೇಶದಲ್ಲಿ ಕಳೆದ ಒಂದೂವರೆ ದಶಕಕ್ಕೂ ಹೆಚ್ಚು ಕಾಲ ತುಳು–ಕನ್ನಡ ಸಂಸ್ಕೃತಿಯ ವೈಭವವನ್ನು ಜಾಗತಿಕ ವೇದಿಕೆಯಲ್ಲಿ ಪ್ರತಿಬಿಂಬಿಸುತ್ತಾ, ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಗಮ್ಮತ್ ಕಲಾವಿದೆರ್ ದುಬೈ ಸಂಸ್ಥೆಯ 2026–27ನೇ ಸಾಲಿನ ಅಧ್ಯಕ್ಷರಾಗಿ ಖ್ಯಾತ ರಂಗಕಲಾವಿದ ವಾಸುಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿ ಸಮಂತಾ ಗಿರೀಶ್, ಕೋಶಾಧಿಕಾರಿಯಾಗಿ ಜೆನೆಟ್ ಸಿಕ್ವೆರಾ ನೇಮಕಗೊಂಡಿದ್ದಾರೆ. ಸಲಹಾ ಸಮಿತಿಯ ಗೌರವ ಪೋಷಕರಾಗಿ ಉದ್ಯಮಿ ಹರೀಶ್ ಬಂಗೇರ್ ಅವರನ್ನು ಆಯ್ಕೆ ಮಾಡಲಾಗಿದ್ದು, ರಂಗ ಸಾರಥಿ ಹಾಗೂ ಖ್ಯಾತ ರಂಗ ನಿರ್ದೇಶಕ ವಿಶ್ವನಾಥ ಬಿ. ಶೆಟ್ಟಿ ಕೂಡ ಸಲಹಾ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.
ಹೊಸ ಪದಾಧಿಕಾರಿಗಳ ನೇತೃತ್ವದಲ್ಲಿ ಗಮ್ಮತ್ ಕಲಾವಿದೆರ್ ದುಬೈ ಸಂಸ್ಥೆ ಇನ್ನಷ್ಟು ಬಲಿಷ್ಠವಾಗಿ ತುಳು–ಕನ್ನಡ ನಾಡಿನ ಕಲೆ, ಸಂಸ್ಕೃತಿ ಮತ್ತು ಸಾಮಾಜಿಕ ಸೇವೆಯನ್ನು ವಿದೇಶದಲ್ಲಿಯೂ ಉತ್ತೇಜಿಸಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.
ವರದಿ: ಕರುಣಾಕರ್ ಶೆಟ್ಟಿ ಮುಲ್ಕಿ


