ದಿನಾಂಕ 02-10-2023 ರಂದು ಬೆಳ್ಳಗೆ 11.30 ಕ್ಕೆ ಸ್ಟೇಟ್ ಬ್ಯಾಂಕ್ ಬಳಿಯ ತುಳುನಾಡ ರಕ್ಷಣಾ ವೇದಿಕೆ (ರಿ) ಕೇಂದ್ರೀಯ ಕಚೇರಿ ಯಲ್ಲಿ ರಾಷ್ಟ್ರ ಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು, ತುಳು ನಾಟಕ ವೇದಿಕೆ ಯ ಸ್ಥಾಪಕ ಅಧ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪು ರವರು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಆಚರಿಸಲಾಯಿತು ಈ ಸಂದರ್ಭದಲ್ಲಿ ಅವರು ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಭಾರತ ದೇಶದ ಸ್ವಾತಂತ್ರ್ಯಕ್ಕಾ ಗಿ ಹೋರಾಟ ನಡೆಸಿದ ಮಾರ್ಗವು ಮುಂದಿನ ಪೀಳಿಗೆಗೆ ಆದರ್ಶವಾಗಿದೆ. ಈ ಸಂದರ್ಭದಲ್ಲಿ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ, ಗೈಟನ್ ಡಿಸೋಜ, ಅಬ್ದುಲ್ ಕಾದರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

