ಉಡುಪಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.) ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಅಕ್ಟೋಬರ್ 2ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ
ಮಹಿಳಾ ಅದ್ಯಕ್ಷೆ ನಾಗಲಕ್ಷ್ಮಿ ಸುಬ್ರಮಣ್ಯನಗರ ವಹಿಸಿದರು.
ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಹಾಗೂ All India Consumer Protection organisations ರಾಜ್ಯಾದ್ಯಕ್ಷ ರಾದ ಯೋಗಿಶ್ ಶೆಟ್ಟಿ ಜಪ್ಪು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರು ಮಾತನಾಡುತ್ತಾ ಮಹಾತ್ಮ ಗಾಂಧೀಜಿಯವರ ಜೀವನ, ಹೋರಾಟ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳನ್ನು ಸ್ಮರಿಸಲಾಯಿತು. ಗಾಂಧೀಜಿಯವರು ಪ್ರತಿಪಾದಿಸಿದ ಸತ್ಯ, ಅಹಿಂಸೆ, ಸರಳತೆ, ಸ್ವಚ್ಛತೆ, ಸೇವಾ ಮನೋಭಾವ, ಸಾಮಾಜಿಕ ಸಾಮರಸ್ಯ ಮತ್ತು ಮಾನವೀಯತೆ ಇಂದಿನ ಸಮಾಜಕ್ಕೂ ಪ್ರಸ್ತುತವಾಗಿವೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು


ಮುಖ್ಯ ಅತಿಥಿಯಾಗಿ
ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮೀನಗರ ,
ಜಿಲ್ಲಾ ಘಟಕದ ಉಪಾಧ್ಯಕ್ಷ ಮನೋಜ್ ಕೆ.ಜಿ. ರೋಡ್, ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ, ಬ್ರಹ್ಮವಾರ ತಾಲೂಕು ಅದ್ಯಕ್ಷ ಶರತ್ ಆರೂರು , ಕಾಪು ಮಹಿಳಾ ಅಧ್ಯಕ್ಷೆ ಅನುಸೂಯ ಶೆಟ್ಟಿ, ಮಹಿಳಾ ಪ್ರಧಾನ ಕಾರ್ಯದರ್ಶಿ ಪವಿತ್ರ, ಉಪಾಧ್ಯಕ್ಷೆ ಗಾಯತ್ರಿ, ಜೊತೆ ಕಾರ್ಯದರ್ಶಿ ವನಿತಾ, ಅವರು ಭಾಗವಹಿಸಿದ್ದರು . ಮಹಿಳಾ ಸಂಘಟನಾ ಕಾರ್ಯದರ್ಶಿ ನಿರ್ಮಲಾ ಮೆಂಡನ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಂಕರ್ ಉಡುಪಿ, ಜಿಲ್ಲಾ ಸಹ ಕಾರ್ಯದರ್ಶಿ ಪ್ರೀತಮ್ ಡಿಕೋಸ್ಟ ಉಪಸ್ಥಿತರಿದ್ದರು.
ಗಾಂಧೀಜಿಯವರ ಆದರ್ಶಗಳ ಸ್ಮರಣೆ
ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಪರಸ್ಪರ ಗೌರವದ ವಾತಾವರಣ ನಿರ್ಮಾಣವಾಗಬೇಕಾದರೆ ಗಾಂಧೀಜಿಯವರ ಮೌಲ್ಯಗಳನ್ನು ಕೇವಲ ಭಾಷಣ ಮತ್ತು ಆಚರಣೆಗಳಿಗೆ ಸೀಮಿತಗೊಳಿಸದೆ, ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಲಾಯಿತು.

ವಿಶೇಷವಾಗಿ ಸಮಾಜದ ದುರ್ಬಲರು, ಸಂಕಷ್ಟದಲ್ಲಿರುವವರು ಹಾಗೂ ಅಗತ್ಯವಿರುವವರಿಗೆ ನೆರವಾಗುವ ಮೂಲಕ ಸೇವಾ ಮನೋಭಾವವನ್ನು ಬೆಳೆಸುವುದು ಗಾಂಧೀಜಿಯವರ ಚಿಂತನೆಗಳಿಗೆ ನೀಡಬಹುದಾದ ಗೌರವವಾಗಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯಿಸಲಾಯಿತು.
ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಸೇವಾ ಕಾರ್ಯ


ಗಾಂಧಿ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಆಸ್ಪತ್ರೆಗೆ ಭೇಟಿ ನೀಡಿದ ವೇದಿಕೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ರೋಗಿಗಳು ಹಾಗೂ ಮಕ್ಕಳ ಆರೋಗ್ಯ ವಿಚಾರಿಸಿ, ಅವರಿಗೆ ಹಣ್ಣುಹಂಪಲು ವಿತರಿಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಆತ್ಮೀಯವಾಗಿ ಮಾತನಾಡಿ, ಧೈರ್ಯ ತುಂಬುವ ಪ್ರಯತ್ನ ಮಾಡಲಾಯಿತು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಾಗಲಕ್ಷ್ಮಿ ಸುಬ್ರಹ್ಮಣ್ಯ ನಗರ ಅವರ ನೇತೃತ್ವದಲ್ಲಿ ನಡೆದ ಸೇವಾ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಶೋಕ್, ಆಡಳಿತ ವೈದ್ಯಾಧಿಕಾರಿ ಡಾ. ಸಂದೀಪ್ ಎ.ಎಸ್., ಮಕ್ಕಳ ತಜ್ಞ ಡಾ. ಅಮರನಾಥ ಶಾಸ್ತ್ರಿ, ಎಂಜಿನಿಯರ್ ಪ್ರಕಾಶ್ ಪೂಜಾರಿ ಹಾಗೂ ನರ್ಸಿಂಗ್ ಸೂಪರಿಂಟೆಂಡೆಂಟ್ ಶ್ರೀಮತಿ ಫ್ಲೋರಾ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು. ಸೇವಾ ಕಾರ್ಯಕ್ರಮದಲ್ಲಿ ಬೈರಂಪಳ್ಳಿ ಘಟಕದ ಉಪಾಧ್ಯಕ್ಷ ಗುಣಾಕಾರ ಹಾಲಕ್ಕಿ, ಮಮತಾ, ರಾಜೇಶ್ವರಿ, ಹರಿಣಾಕ್ಷಿ, ಜಯಂತಿ ಆಚಾರ್ಯ, ರಂಜಿತಾ ಶೆಟ್ಟಿ, ವಸಂತಿ ಬಿಲ್ಲವ, ಗೀತಾ ಪೂಜಾರಿ, ಶ್ಯಾಮಲ, ಸಂತೋಷ್ ಶೆಟ್ಟಿ, ಜ್ಯೋತಿ ಬನ್ನಂಜೆ ಹಾಗೂ ಸುಲೋಚನಾ ಸೇರಿದಂತೆ ಮಹಿಳಾ ಘಟಕದ ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇದರೊಂದಿಗೆ ತುಳುನಾಡ ರಕ್ಷಣಾ ವೇದಿಕೆಯ ಜಿಲ್ಲಾ, ತಾಲೂಕು ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ಕಾರ್ಯಕ್ರಮಕ್ಕೆ ಬೆಂಬಲ ನೀಡಿದರು.

ಸೇವೆಯ ಮೂಲಕ ಗಾಂಧೀಜಿಗೆ ಗೌರವ
ಗಾಂಧೀಜಿಯವರ ಜಯಂತಿಯನ್ನು ಕೇವಲ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದು ಅಥವಾ ಕಾರ್ಯಕ್ರಮ ನಡೆಸುವುದಕ್ಕೆ ಸೀಮಿತಗೊಳಿಸದೆ, ಅವರ ಸೇವೆ, ಮಾನವೀಯತೆ, ಸರಳತೆ ಮತ್ತು ಸಮಾಜಮುಖಿ ಚಿಂತನೆಗಳನ್ನು ಕಾರ್ಯರೂಪಕ್ಕೆ ತರುವ ಉದ್ದೇಶದಿಂದ ಆಸ್ಪತ್ರೆಯಲ್ಲಿ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಸಮಾಜದಲ್ಲಿ ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು, ಅಗತ್ಯವಿರುವವರಿಗೆ ನೆರವಾಗುವುದು ಹಾಗೂ ಮಾನವೀಯ ಸಂಬಂಧಗಳನ್ನು ಗಟ್ಟಿಗೊಳಿಸುವುದು ಗಾಂಧೀಜಿಯವರ ಚಿಂತನೆಗಳಿಗೆ ನಿಜವಾದ ಗೌರವವಾಗಿದೆ. ಈ ಆಶಯದೊಂದಿಗೆ ರೋಗಿಗಳು ಹಾಗೂ ಮಕ್ಕಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು ಎಂದು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ತಿಳಿಸಿದೆ.




