Thursday, October 10, 2024
spot_img
More

    Latest Posts

    ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

    ಮಂಗಳೂರು: ಮಾದಕ ವಸ್ತು ಎಂಡಿಎಂಎ ಹೊಂದಿ, ಕಾರಿನಲ್ಲಿಟ್ಟು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ಫರಂಗಿಪೇಟೆ ನಿವಾಸಿ ಮಹಮ್ಮದ್ ಆಶ್ರಫ್ ಯಾನೆ ಚೋಟಾ ಆಶ್ರಫ್, ಮತ್ತು ಪೆರ್ಮನ್ನೂರು ದಾರಂದಬಾಗಿಲು ನಿವಾಸಿ ದಾವವೂದ್ ಫರ್ವೆಝ್(36) ಎಂದು ಗುರುತಿಸಲಾಗಿದೆ.

    ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಕಾರಿನಲ್ಲಿಟ್ಟು ಮಂಗಳೂರಿಗೆ ತಂದು ನಗರದ ನೆಹರೂ ಮೈದಾನ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ ರವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ. ಇವರಿಂದ ಒಟ್ಟು 55.5 ಗ್ರಾಂ ತೂಕದ 2,77,500 ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು 2, ನಗದು ರೂಪಾಯಿ 3230 ಹಾಗೂ ಸಿಲ್ವರ್ ಬಣ್ಣದ ಮಾರುತಿ ಬೆಲೆನೊ ಕಾರು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು, ನಗದು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಕಾರಿನ ಒಟ್ಟು ಮೌಲ್ಯ ರೂ 13,06,230 ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ ಮೊಹಮ್ಮದ್ ಅಶ್ರಫ್ ಯಾನೆ ಛೋಟಾ ಅಶ್ರಫ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆ ಹಾಗೂ ಬಂಟ್ವಾಳ ಠಾಣೆಯಲ್ಲಿ ಒಟ್ಟು 6 ಗಾಂಜಾ ಪ್ರಕರಣಗಳು ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ದಾವೂದ್ ಪರ್ವೇಸ್ ವಿರುದ್ದ ಮಂಗಳೂರು ಉತ್ತರ, ಮಂಗಳೂರು ಗ್ರಾಮಾಂತರ, ಕಾರ್ಕಳ, ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಒಟ್ಟು 6 ಗಾಂಜಾ ಪ್ರಕರಣಗಳು ದಾಖಲಾಗಿದೆ. ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss