ಮಂಗಳೂರು: “ಜನವರಿ 10ರಂದು ನಗರದ ಪುರಭವನದಲ್ಲಿ ಶ್ರೀ ಲಲಿತೆ ಕಲಾವಿದರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ತ್ರಿರಂಗ ಸಂಗಮ ಮುಂಬೈ ಸಂಚಾಲಕತ್ವದಲ್ಲಿ ಗರುಡ ಪಂಚಮಿ 50ರ ಪ್ರದರ್ಶನದ ಸಂಭ್ರಮ ಹಾಗೂ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ ರಂಗ ಕಲಾಬಂಧು ಬಿರುದು ಪ್ರದಾನ ನಡೆಯಲಿದೆ” ಎಂದು ತಂಡದ ಸಂಚಾಲಕ ಲಯನ್ ಡಿ. ಕಿಶೋರ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಅನಂತ ಪದ್ಮನಾಭ ಅಸಣ್ಣ ವಹಿಸಲಿದ್ದು, ಮೇಯರ್ ಸುಧೀರ್ ಶೆಟ್ಟ ಕಣ್ಣೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಳು ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯದರ್ಶಿ ಪುರುಷೋತ್ತಮ್ ಭಂಡಾರಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕೋಶಾಧಿಕಾರಿ ಸಿಎ ಸುದೇಶ್ ರೈ, ಜನನಿ ಕನ್ ಸ್ಟ್ರಕ್ಷನ್ ಮಾಲಕ ಸುಧಾಕರ್ ಪೂಂಜ, ಹೋಟೆಲ್ ಉದ್ಯಮಿ ಶಶಿಕಾಂತ ಶೇಖ, ಲ. ಚಂದ್ರಹಾಸ್ ಶೆಟ್ಟಿ, ಲೀಲಾಕ್ಷ ಕರ್ಕೇರ, ಲ. ಸ್ವರೂಪ ಎನ್. ಶೆಟ್ಟಿ, ಲ. ತಾರನಾಥ ಶೆಟ್ಟಿ ಬೋಳಾರ್, ನವೀನ್ ಶೆಟ್ಟಿ ಅಳಕೆ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದರು.
“ಇದೇ ಸಂದರ್ಭದಲ್ಲಿ ತ್ರಿರಂಗ ಸಂಗಮ ಮುಂಬೈ ಇದರ ಸಂಚಾಲಕರಾದ ಅಶೋಕ್ ಪಕ್ಕಳ, ನವೀನ್ ಶೆಟ್ಟಿ ಇನ್ನ, ಕರ್ನೂರು ಮೋಹನ್ ರೈ ಅವರನ್ನು ಸನ್ಮಾನಿಸಲಾಗುವುದು” ಎಂದು ಕದ್ರಿ ನವನೀತ್ ಶೆಟ್ಟಿ ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಲಯನ್ ಡಿ.ಕಿಶೋರ್ ಶೆಟ್ಟಿ, ನಾಟಕ ರಚನೆಕಾರ ಜೀವನ್ ಉಳ್ಳಾಲ್, ಮೋಹನ್ ಕೊಪ್ಪಲ, ಕದ್ರಿ ನವನೀತ್ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಯಾದವ ಮಣ್ಣಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.
Trending
- ಉಡುಪಿ: ಬಾರ್-ಪಬ್ಗಳ ಮೇಲೆ ಪೊಲೀಸರ ವಿಶೇಷ ದಾಳಿ; ಅಪ್ರಾಪ್ತರು ಮದ್ಯ ಸೇವನೆ ವೇಳೆ ಪತ್ತೆ
- ಕಾಪು ತಾಲೂಕು–ಬೈರಂಪಳ್ಳಿ ಘಟಕದ ತುಳುನಾಡ ರಕ್ಷಣಾ ವೇದಿಕೆ ಕಾರ್ಯಕರ್ತರ ಸ್ನೇಹ ಸಮ್ಮಿಲನ ಯಶಸ್ವಿ ,ಹಲವರು ಸದಸ್ಯತ್ವ ಪಡೆದು ಸಂಘಟನೆಗೆ ಸೇರ್ಪಡೆ – ತುಳುನಾಡಿನ ಭಾಷೆ, ಸಂಸ್ಕೃತಿ ಉಳಿವಿಗೆ ಯುವಜನತೆಗೆ ಯೋಗಿಶ್ ಶೆಟ್ಟಿ ಜಪ್ಪು ಕರೆ
- ಉಳ್ಳಾಲ – ಭಗವತೀ ಕ್ಷೇತ್ರ ವಿವಾದದಲ್ಲಿ ಬೆದರಿಕೆ ಆರೋಪ: ಕಾಂಗ್ರೆಸ್ ಮುಖಂಡನ ಆಡಿಯೋ ವೈರಲ್ ಆಡಿಯೋ ಕುರಿತು ಪೊಲೀಸರಿಗೆ ದೂರು
- ಕುಂದಾಪುರ ಶೂಟೌಟ್ ಪ್ರಕರಣ: ಪ್ರಮುಖ ಆರೋಪಿ ಡೆರಿಕ್ ಕ್ರಾಸ್ತಾ ಬಂಧನ
- ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಎನ್.ಪಿ. ಪುಷ್ಪರಾಜನ್ ಆಗ್ರಹ
- ಕಡಬ: ಬಿರುಗಾಳಿಗೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ದುರ್ಮರಣ
- ಕಾನೂನುಬದ್ಧ ನೋಂದಾಯಿತ ಆಯುಷ್ ವೈದ್ಯರನ್ನು ‘ನಕಲಿ ವೈದ್ಯರು’ ಎಂದು ಕರೆಯುವುದು ಸರಿಯಲ್ಲ: NCISM ಸ್ಪಷ್ಟನೆ
- ರತ್ನಾಕರ್ ಸುವರ್ಣರ ಸುಳ್ಳು ಮರಣ ಸುದ್ದಿ ಹರಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಪೊಲೀಸ್ ಠಾಣೆಗೆ ಭೇಟಿ ನೀಡಿ ಜೆಡಿಎಸ್ ಮುಖಂಡರ ಮನವಿ
