Wednesday, September 28, 2022

ಮಕ್ಕಳ ದೈಹಿಕ – ಮಾನಸಿಕ ಬೆಳವಣಿಗೆಗೆ ಅತ್ಯಗತ್ಯ ʼವ್ಯಾಯಾಮʼ

ಬದಲಾದ ಪರಿಸ್ಥಿತಿ ದೊಡ್ಡವರಿಗೆ ಮಾತ್ರವಲ್ಲ, ಮಕ್ಕಳ ಮೇಲೂ ತೀವ್ರವಾದ ಪ್ರಭಾವ ಬೀರುತ್ತಿವೆ. ಟೈಮ್ ಪಾಸ್ ಮಾಡಲು ಟಿವಿ, ಮೊಬೈಲ್ ನೋಡುವುದರಿಂದ ಸ್ಥೂಲಕಾಯ ದಿನೇ ದಿನೇ ಹೆಚ್ಚಾಗುತ್ತಿದೆ.
More

  Latest Posts

  ಇನ್ಮುಂದೆ ಪೋಸ್ಟ್ ಆಫೀಸ್‌ನಲ್ಲೇ ʻಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ʼಗೆ ಅರ್ಜಿ ಸೌಲಭ್ಯ: ಇಂದಿನಿಂದಲೇ ಈ ಸೇವೆ ಆರಂಭ

  ದೆಹಲಿ: ನಿಮ್ಮ ಪಾಸ್‌ಪೋರ್ಟ್ ಅರ್ಜಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯುವುದು ಇನ್ನು ಬಹಳ ಸುಲಭ. ಸೆಪ್ಟೆಂಬರ್ 28 ರಿಂದ ಅಂದ್ರೆ, ಇಂದಿನಿಂದ ಪ್ರಾರಂಭವಾಗುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳಲ್ಲಿ...

  ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

  ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

  ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

  ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

  ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

  ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

  ಯಕ್ಷಗಾನ ಇರುವವರೆಗೂ ಕನ್ನಡ ಭಾಷೆಗೆ ಅಪಾಯವಿಲ್ಲ: ಡಾ. ಜಿ. ಎಲ್‌. ಹೆಗಡೆ

  ಕೊಣಾಜೆ‌:  ‘ಯಕ್ಷಗಾನ ಸಮೂಹ ಕಲೆಯಾಗಿ, ಆರಾಧನೆ ಕಲೆಯಾಗಿ ಜಗತ್ತಿಗೆ ವಿಸ್ಮಯ ಹುಟ್ಟಿಸುವ ಶ್ರೇಷ್ಠ ಕಲಾ ಮಾಧ್ಯಮ. ಯಕ್ಷಗಾನ ಇರುವವರೆಗೂ ಕನ್ನಡ ಭಾಷೆ, ಸಂಸ್ಕೃತಿಗೆ ಯಾವುದೇ ಅಪಾಯವಿಲ್ಲ ‘ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ಜಿ.ಎಲ್‌.ಹೆಗಡೆ ಕುಮಟಾ ಅಭಿಪ್ರಾಯಪಟ್ಟರು. 

  ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಸಭಾಂಗಣದಲ್ಲಿ ಅಂಬುರುಹ ಯಕ್ಷ ಸದನ ಪ್ರತಿಷ್ಠಾನ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಪಿ ದಯಾನಂದ ಪೈ ಮತ್ತು ಪಿ.ಸತೀಶ್‌ ಪೈ ಯಕ್ಷಗಾನ ಅಧ್ಯಯನ ಕೇಂದ್ರಗಳ ಸಹಯೋಗದೊಂದಿಗೆ ಶನಿವಾರ ನಡೆದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರ ಸಂಸ್ಮರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

   'ಪೂಂಜರಿಗೆ ಭಾಗವತನಿಗೆ ಇರಬೇಕಾದ ಸಾಹಿತ್ಯ ಪರಿಜ್ಞಾನ ಮತ್ತು ಹಿಡಿತ ಅದ್ಭುತವಾಗಿತ್ತು. ಅವರು ಶಿಷ್ಯರ ಮೂಲಕ ಯಕ್ಷ ಪರಂಪರೆಯನ್ನು ಮುಂದುವರಿಸಿದ್ದಾರೆ' ಎಂದರು. ಇದೇ ಸಂದರ್ಭದಲ್ಲಿ ಪೂಂಜರ ಸ್ಮರಣಾರ್ಥ ಅವರ ಶಿಷ್ಯರು ಮತ್ತು ಅಭಿಮಾನಿಗಳು ನೂತನವಾಗಿ ಸ್ಥಾಪಿಸಿದ ಅಂಬುರುಹ ಯಕ್ಷ ಸದನ ಪ್ರತಿಷ್ಠಾನ ಬೊಟ್ಟಿಕೆರೆ ಇದರ ಲೋಗೋವನ್ನು ಅನಾವರಣಗೊಳಿಸಲಾಯಿತು.

  ಯಕ್ಷಗಾನದ ದಶಾವತಾರಿ:
  ಹಿರಿಯ ಅರ್ಥಧಾರಿ ಮತ್ತು ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಮಾತನಾಡಿ,  ಪುರುಷೋತ್ತಮ ಪೂಂಜರ  ಸರ್ವಾಂಗ ಪ್ರತಿಭೆಗೆ ಮಾರುಹೋದ ರಸಿಕ ನಾನು. ಅವರು ಯಕ್ಷಗಾನದ ದಶಾವತಾರಿ, ಶ್ರೇಷ್ಠ ಯಕ್ಷ ಕವಿಗಳಲ್ಲಿ ಒಬ್ಬರು, ಅಸಾಧಾರಣ ಕಲಾವಿದ ಮತ್ತು ಯಕ್ಷಗಾನ ಗುರು. ಯಕ್ಷಗಾನದ ತುಳು ಪ್ರಸಂಗಗಳಲ್ಲೂ ಗಾಂಭೀರ್ಯತೆ ಉಳಿಸಿಕೊಂಡ ವಿರಳರಲ್ಲಿ ಒಬ್ಬರು’ ಎಂದು ಶ್ಲಾಘಿಸಿದರು. 
  ಸಂಸ್ಮರಣಾ ಭಾಷಣ ಮಾಡಿದ ಕಲಾವಿದ ವಿಶ್ವೇಶ್ವರ ಭಟ್‌ ಸುಣ್ಣಂಬಳ ಅವರು ‘ಪೂಂಜರು ಅಪಾರ ಜ್ಞಾನಿ. ಕಲಾವಿದನ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರ ಹಾಡು, ಅರ್ಥಗಾರಿಕೆ ಇರುತ್ತಿತ್ತು. ಹೊಸ ಪದ್ಯಗಳನ್ನು ಹೊಸೆದು ಹಾಡುತ್ತಿದ್ದರು. ಅವರ ಸಾಹಿತ್ಯಪೂರ್ಣ ಪ್ರಸಂಗಗಳು ಹಿರಿಯ ಭಾಗವತರ ಮೆಚ್ಚುಗೆ ಗಳಿಸಿಕೊಂಡಿವೆ’ ಎಂದು ಸ್ಮರಿಸಿದರು.

  ‘ಯಕ್ಷ ಪುರುಷೋತ್ತಮ’ ಕೃತಿಕರ್ತರಿಗೆ ಸಮ್ಮಾನ:
  ಬೊಟ್ಟಿಕೆರೆ ಪುರುಷೋತ್ತಮ ಪೂಂಜರ ಸ್ಮೃತಿ ಸಂಪುಟ ‘ಯಕ್ಷ ಪುರುಷೋತ್ತಮ’ ಕೃತಿಯ ಸಂಪಾದಕರಾಗಿ ಕಾರ್ಯನಿರ್ವಹಿಸಿದ ಯಕ್ಷಗಾನ ವಿದ್ವಾಂಸ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಮತ್ತು ಪ್ರಕಾಶಕ ಅಜೆಕಾರು ಕಲಾಭಿಮಾನಿ ಬಳಗದ ಅಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ, ಅವರನ್ನು ಸನ್ಮಾನಿಸಲಾಯಿತು.
  ಗ್ರಂಥದ ಬಗ್ಗೆ ಮಾತನಾಡಿದ ಸಂಪಾದಕ ಭಾಸ್ಕರ ರೈ ಕುಕ್ಕುವಳ್ಳಿ ‘ಪುರುಷೋತ್ತಮ ಪೂಂಜಾರ ಸಂಸ್ಮರಣಾ ಗ್ರಂಥ ಬರಿಯ ವ್ಯಕ್ತಿ ಪೂಜೆಯಲ್ಲ; ಯಕ್ಷ ಕಲೆಯ ಬಗ್ಗೆ ಆಸಕ್ತರು ಓದಲು ಒಂದು ಆಕರ ಗ್ರಂಥ.  ಇದರಲ್ಲಿ ಪೂಂಜ ಅವರೇ ಬರೆದ  ಲೇಖನಗಳೂ ಸೇರಿವೆ. ಸಾರ್ವಜನಿಕ ಸಮ್ಮಾನದೊಂದಿಗೆ ಅಭಿನಂದನಾ ಗ್ರಂಥವಾಗಿ ಪೂಂಜರಿಗೆ ಸಮರ್ಪಣೆಯಾಗಬೇಕಾಗಿದ್ದ ಕೃತಿ ಸಂಸ್ಮರಣಾ ಗ್ರಂಥವಾಗಿರುವುದು ವಿಪರ್ಯಾಸ’ ಎಂದರು. ಅಜೆಕಾರು ಬಾಲಕೃಷ್ಣ ಶೆಟ್ಟಿ, ಗ್ರಂಥವನ್ನು ಸಿದ್ಧಪಡಿಸುವಲ್ಲಿ ಸಹಕರಿಸಿದ ಪೂಂಜರ ಕುಟುಂಬ, ಅಭಿಮಾನಿಗಳು ಮತ್ತು ಶಿಷ್ಯರನ್ನು ನೆನೆದರು. ಸೆ.17 ರಂದು ಮುಂಬಯಿಯಲ್ಲಿ ವಿಧ್ಯುಕ್ತವಾಗಿ ಗ್ರಂಥ ಅನಾವರಣಗೊಳಿಸುವುದಾಗಿ ಅವರು ತಿಳಿಸಿದರು.
  ಇದೇ ಸಂದರ್ಭದಲ್ಲಿ ಮಂಗಳೂರು ವಿವಿಯ ಪ್ರಸಾರಾಂಗ, ಕಲಾಗಂಗೋತ್ರಿ ಹಾಗೂ ಗೋಪಾಲಕೃಷ್ಣ ಯಕ್ಷಗಾನ ಸಂಘದ ಪ್ರತಿನಿಧಿಗಳಾದ ಡಾ.ಧನಂಜಯ ಕುಂಬ್ಳೆ, ಕೃಷ್ಣಮೂಲ್ಯ ಕೈರಂಗಳ, ಸದಾಶಿವ ಮಾಸ್ಟರ್ ಹಾಗೂ ʼಆಕೃತಿ ಪ್ರಕಾಶನʼದ ಕಲ್ಲೂರು ನಾಗೇಶ್‌, ಕಟೀಲು ಆರು ಮೇಳಗಳ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ ಅವರನ್ನು ಸನ್ಮಾನಿಸಲಾಯ್ತು.
  ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯ ಕದ್ರಿ ನವನೀತ ಶೆಟ್ಟಿ, ಮಂಗಳೂರು ವಿವಿಯ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಶ್ರೀಪತಿ ಕಲ್ಲೂರಾಯ, ಶ್ರೀ ವಿಷ್ಣುಮೂರ್ತಿ ಜನಾರ್ದನ  ದೇವಸ್ಥಾನದ  ಅರ್ಚಕ ಟಿ. ಸುಬ್ರಹ್ಮಣ್ಯ ಭಟ್, ಅಂಬುರುಹ ಯಕ್ಷ ಸದನ ಪ್ರತಿಷ್ಠಾನದ ಅಧ್ಯಕ್ಷೆ ಶೋಭಾ ಪುರುಷೋತ್ತಮ ಪೂಂಜ ಉಪಸ್ಥಿತರಿದ್ದರು.
  ಪ್ರತಿಷ್ಠಾನದ ಉಪಾಧ್ಯಕ್ಷ ರಾಜಾರಾಂ ಹೊಳ್ಳ ಸ್ವಾಗತಿಸಿದರು. ಸುನಿಲ್ ಪಲ್ಲಮಜಲು ಹಾಗೂ ಸದಾಶಿವ ಆಳ್ವ ತಲಪಾಡಿ ಕಾರ್ಯಕ್ರಮ ನಿರೂಪಿಸಿದರು. ದೀವಿತ್ ಎಸ್. ಕೋಟ್ಯಾನ್ ವಂದಿಸಿದರು. ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ ಯಕ್ಷಗಾನ ಪ್ರಸಂಗ ʼಮಾನಿಷಾದʼ ವನ್ನು ಕಟೀಲು ಮೆಳದ ಕಲಾವಿದರು ಮತ್ತು ಪೂಂಜರ ಶಿಷ್ಯರು ಪ್ರದರ್ಶಿಸಿದರು. 

  Latest Posts

  ಇನ್ಮುಂದೆ ಪೋಸ್ಟ್ ಆಫೀಸ್‌ನಲ್ಲೇ ʻಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ʼಗೆ ಅರ್ಜಿ ಸೌಲಭ್ಯ: ಇಂದಿನಿಂದಲೇ ಈ ಸೇವೆ ಆರಂಭ

  ದೆಹಲಿ: ನಿಮ್ಮ ಪಾಸ್‌ಪೋರ್ಟ್ ಅರ್ಜಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯುವುದು ಇನ್ನು ಬಹಳ ಸುಲಭ. ಸೆಪ್ಟೆಂಬರ್ 28 ರಿಂದ ಅಂದ್ರೆ, ಇಂದಿನಿಂದ ಪ್ರಾರಂಭವಾಗುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳಲ್ಲಿ...

  ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

  ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

  ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

  ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

  ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

  ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

  Don't Miss

  ಮಂಗಳೂರು: ಹಾಸ್ಟೆಲ್ ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ

  ಮಂಗಳೂರು:ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ನಿಂದ ಬುಧವಾರ ಮುಂಜಾನೆ ಸುಮಾರು 3.30 ಕ್ಕೆ...

  ಧಾರ್ಮಿಕ ಮುಂದಾಳು ಕಾಸರಗೋಡು ಕೆ.ಎನ್.ವೆಂಕಟ್ರಮಣ ಹೊಳ್ಳರಿಗೆ ಧರ್ಮಸ್ಥಳ ಕ್ಷೇತ್ರದಿಂದ “ಭಜನಾ ಸಾಧಕ ಪುರಸ್ಕಾರ” ಪ್ರದಾನ

  ಕಾಸರಗೋಡು:ಧಾರ್ಮಿಕ-ಸಾಂಸ್ಕೃತಿಕ ಮುಂದಾಳು ಕೆ.ಎನ್. ವೆಂಕಟ್ರಮಣ ಹೊಳ್ಳ ಕಾಸರಗೋಡು ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ “ಭಜನಾ ಸಾಧಕ ಪುರಸ್ಕಾರ”ವನ್ನು ಶುಕ್ರವಾರ ಪ್ರದಾನಿಸಲಾಗಿದೆ. ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ನ ನೇತೃತ್ವದಲ್ಲಿ ಅಮೃತ ವರ್ಷಿಣಿ...

  ಮಂಗಳೂರಿನಲ್ಲಿ ಸೆ.28 ರಿಂದ ದಸರಾ ರಜೆ-ಶನಿವಾರ ಪೂರ್ಣದಿನದ ತರಗತಿ

  ಮಂಗಳೂರು: ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ದಸರಾ ಸೆಪ್ಟೆಂಬರ್ 28ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಘೋಷಣೆ ಮಾಡಲಾಗಿದೆ.

  ಕಾರ್ಕಳ: ಅಜೆಕಾರಿನಲ್ಲಿ 14ನೇ ಶತಮಾನದ ಶಿಲಾ ಶಾಸನ ಪತ್ತೆ

  ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಗಾಣದಬೆಟ್ಟು ಎಂಬಲ್ಲಿ 14ನೇ ಶತಮಾನದ ವೈಷ್ಣವ ಪಂಥದ ಶಿಲಾ ಶಾಸನ ಪತ್ತೆಯಾಗಿದೆ ಗಾಣದಬೆಟ್ಟು ಅಮ್ಮು ಶೆಟ್ಟಿ ಎಂಬುವರ ಜಾಗದಲ್ಲಿ...

  ವಿಟ್ಲ:ಪಿಕಪ್-ಬೈಕ್ ಢಿಕ್ಕಿ; ಯುವಕ ಮೃತ್ಯು

  ವಿಟ್ಲ: ಪಿಕಪ್ ವಾಹನ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ‌ ಬೈಕ್ ಸವಾರ ಮೃತಪಟ್ಟ ಘಟನೆ ವಿಟ್ಲದ ಕೇಪು ಮೈರ ಎಂಬಲ್ಲಿ ನಡೆದಿದೆ. ಸಂದೇಶ್(33)ಮೃತ ದುರ್ದೈವಿ.ಈತ...