Friday, April 19, 2024
spot_img
More

    Latest Posts

    ಮಂಗಳೂರ ಬೆಡಗಿ ‘ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್’ ಗೌರವಕ್ಕೆ ಪಾತ್ರ.!

    ಮಂಗಳೂರು: ನಗರದ ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿ ಅನನ್ಯಾ ಸಿಂಗ್ ‘ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್’ ಕಿರೀಟವನ್ನು ಮುಡಿಗೇರಿಸಿದ್ದಾರೆ.

    ನವದೆಹಲಿಯ ಗ್ಲೋಬಲ್ ಇಂಡಿಯಾ ಎಂಟರ್​ಟೈನ್​ಮೆಂಟ್ ಪ್ರೊಡಕ್ಷನ್ ಆಯೋಜಿಸಿದ್ದ ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್ 2021 ಸ್ಪರ್ಧೆಯಲ್ಲಿ ಅನನ್ಯಾ ಸಿಂಗ್ ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಈ ಗೌರವ ಲಭಿಸಿದೆ. ಅನನ್ಯಾ ಸಿಂಗ್ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿಯಾಗಿದ್ದಾರೆ.

    ಈ ಸ್ಪರ್ಧೆಯಲ್ಲಿ ದೇಶದ ಅನೇಕ ರಾಜ್ಯಗಳ ಸ್ಪರ್ಧಿಗಳು ಭಾಗವಹಿಸಿದ್ದರು. ಸ್ಪರ್ಧಿಯ ನಡೆ, ಪರಿಚಯ, ಪ್ರಶ್ನೋತ್ತರಗಳ ಹಿನ್ನೆಲೆಯಲ್ಲಿ ಅನನ್ಯಾ ಸಿಂಗ್ ಮಿಸ್ ಇಂಡಿಯಾ ಗೌರವಕ್ಕೆ ಪಾತ್ರರಾಗಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss