ಮಂಗಳೂರು: ನಗರದ ಕೆಂಜಾರಿನಲ್ಲಿರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಸಾಗಾಟದ 14.50 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕ ಮಂಗಳೂರು ಏರ್ಪೋರ್ಟ್‌ನಲ್ಲಿ ಬಂದಿಳಿದಿದ್ದಾನೆ. ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ ಈತ ನಾಲ್ಕು ರಟ್ಟಿನ ಪೆಟ್ಟಿಗೆಯ ಒಳಭಾಗದಲ್ಲಿ ಇರಿಸಲಾಗಿದ್ದ ನಾಲ್ಕು ನೀಲಿ ಬಣ್ಣದ ಕಾರ್ಬನ್ ನ ದಪ್ಪದ ಕಾಗದದ ಹಾಳೆಗಳ ಎರಡು ಪದರಗಳ ನಡುವೆ ಬಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ವಶಕ್ಕೆ ತೆಗೆದುಕೊಂಡು 242 ಗ್ರಾಂ ಚಿನ್ನದ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 14.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
©2021 Tulunada Surya | Developed by CuriousLabs