Saturday, April 20, 2024
spot_img
More

    Latest Posts

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 18.85 ಲಕ್ಷ ರೂ. ಮೊತ್ತದ ಚಿನ್ನ ಸೀಝ್

    ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18.95 ಲಕ್ಷ ರೂ. ಮೌಲ್ಯದ ಅಕ್ರಮ ಸಾಗಾಟದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಝ್ ಮಾಡಿದ್ದಾರೆ.ಭಟ್ಕಳ ಮೂಲದ ಪ್ರಯಾಣಿಕನೋರ್ವನು ಸ್ಪೈಸ್ ಜೆಟ್ ಮೂಲಕ ಜೂ.22ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಆಗ ಈತ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

    ಈ ಪ್ರಯಾಣಿಕ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಪೇಪರ್ ಹಾಗೂ ಪ್ಲಾಸ್ಟಿಕ್ ನೊಳಗಿಟ್ಟು ಒಳ ಉಡುಪಿನ ಸ್ಟಿಚ್ ಮಾಡಿರುವ ಕಳ್ಳ ಕಿಸೆಯೊಳಗೆ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ. ಈತನ ಕೃತ್ಯವನ್ನು ಪತ್ತೆ ಹಚ್ಚಿರುವ ಕಸ್ಟಮ್ಸ್ ಅಧಿಕಾರಿಗಳು ಮಾಲು ಸಮೇತ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಪ್ರಯಾಣಿಕನಿಂದ 364.500 ಗ್ರಾಂ ತೂಕದ 18,95,400 ರೂ. ಮೊತ್ತದ 24 ಕ್ಯಾರೆಟ್ ಶುದ್ಧ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss