Thursday, March 28, 2024
spot_img
More

    Latest Posts

    ಆಟೋ, ಕಾರ್ ಸೇರಿ ವಾಹನ ಚಾಲಕರು, ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್

    ಧಾರವಾಡ: ರಾಜ್ಯದಲ್ಲಿ ಶೀಘ್ರವೇ ಚಾಲಕರ ಕಲ್ಯಾಣ ಮಂಡಳಿ ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕರನ್ನು ನೋಂದಣಿ ಮಾಡಿಕೊಂಡು ಅವರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ತಲುಪಿಸಲು ಕಾರ್ಮಿಕ ಇಲಾಖೆಯಿಂದ ಯೋಜನೆ ರೂಪಿಸಲಾಗಿದೆ ಎಂದರು.

    ವಿವಿಧ ರೀತಿಯ ವಾಹನಗಳನ್ನು ಚಲಾಯಿಸುವ ಚಾಲಕರು ಕ್ಲೀನರ್ ಗಳು ಮತ್ತು ಅವರ ಮಕ್ಕಳ ಕುಟುಂಬದ ರಕ್ಷಣೆಗಾಗಿ ಚಾಲಕರ ಕಲ್ಯಾಣ ಮಂಡಳಿ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

    ಆಟೋ, ಪ್ರವಾಸಿ ವಾಹನ, ಲಾರಿ, ಟ್ರಕ್ ಪ್ರಯಾಣಿಕರ ವಾಹನ ಸೇರಿದಂತೆ ವಿವಿಧ ರೀತಿಯ ವಾಹನಗಳ ಚಾಲನೆ ಮಾಡುವ ಚಾಲಕರು ಮತ್ತು ಕ್ಲೀನರ್ ಗಳು ರಕ್ಷಣೆಯ ಉದ್ದೇಶದಿಂದ ಮತ್ತು ಅವರ ಕುಟುಂಬದವರಿಗೆ ನೆರವಾಗಲು ಕಾರ್ಮಿಕ ಕಲ್ಯಾಣ ಮಂಡಳಿ ರೀತಿಯಲ್ಲಿ ಚಾಲಕರ ಕಲ್ಯಾಣ ಮಂಡಳಿಯನ್ನು ರಚಿಸಲಾಗುವುದು. ಈ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರವೇ ಚಾಲಕರ ಕಲ್ಯಾಣ ಮಂಡಳಿ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss