ಕೊಲ್ಲೂರು: ಕಾಂತಾರ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಪುತ್ರ ರನ್ವಿತ್ ಶೆಟ್ಟಿ, ಪತ್ನಿ ಪ್ರಗತಿ ಜೊತೆ ದೇಗುಲಕ್ಕೆ ಆಗಮಿಸಿದ ರಿಷಬ್ ಶೆಟ್ಟಿ ಅವರು ದೇವಿ ದರ್ಶನ ಪಡೆದರು. ಇದಕ್ಕೂ ಮುನ್ನ ನಟನನ್ನು ದೇವಸ್ಥಾನದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಕುಂದಾಪುರ ಮೂಲದವರಾದ ರಿಷಬ್, ಕೊಲ್ಲೂರು ಮೂಕಾಂಬಿಕೆಯ ದೊಡ್ಡ ಭಕ್ತರೂ ಹೌದು.
