ಬೆಂಗಳೂರು: ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯ್ತಿಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಳ ಮಾಡಿ, ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರುಗಿಗೆ ರೂ.3,000, ಉಪಾಧ್ಯಕ್ಷರಿಗೆ ರೂ.2,000 ಹಾಗೂ ಸದಸ್ಯರಿಗೆ ರೂ.1000 ಮಾಸಿಕ ಗೌರವಧನವನ್ನು ನಿಗಧಿಪಡಿಸಲಾಗಿತ್ತು ಎಂದಿದ್ದಾರೆ.
ಪ್ರಸ್ತುತ ಗೌರವಧನವನ್ನು ( honorarium ) ಪರಿಷ್ಕರಿಸಿ, ಗ್ರಾಮ ಪಂಚಾಯಿತಿಗಳ ಅಧ್ಯಕ್ಷರುಗಳಿಗೆ ರೂ.6,000, ಉಪಾಧ್ಯಕ್ಷರುಗಳಿಗೆ ರೂ.4,000 ಹಾಗೂ ಸದಸ್ಯರುಗಳಿಗೆ ರೂ.2,000 ಮಾಸಿಕ ಗೌರವಧವನ್ನು ಪರಿಷ್ಕರಿಸಿ ನಿಗದಿಗೊಳಿಸಿ ಆದೇಶಿಸಿದ್ದಾರೆ.