Tuesday, July 23, 2024
spot_img
More

    Latest Posts

    ಹ್ಯಾಕರ್‌ ಗಳ ಬಲೆಗೆ ಸಿಲುಕಿ ಸೌದಿ ಜೈಲು ಪಾಲಾದ ಕಡಬದ ಯುವಕ-ಪುತ್ರನ ಬಿಡುಗಡೆಗೆ ತಾಯಿ ಕಣ್ಣೀರು

    ಮಂಗಳೂರು: ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು. ತನ್ನ ಸ್ವಂತ ದುಡಿಮೆಯಿಂದ ಕುಟುಂಬವನ್ನು ನಿರ್ವಹಿಸಬೇಕೆನ್ನುವ ಕನಸು ಕಂಡ ಕಡಬ ಮೂಲದ ಯುವಕನೋರ್ವ ವಿದೇಶದಲ್ಲಿ ಉದ್ಯೋಗಕ್ಕೆ ಸೇರಿಕೊಂಡ. ಸೌದಿ ಅರೇಬಿಯಾದಲ್ಲಿ ಉತ್ತಮ ಉದ್ಯೋಗ ದೊರೆತು ಕೈತುಂಬಾ ಸಂಪಾದನೆಯೂ ಇತ್ತು. ಆದರೆ, ಕೆಲವೇ ಸಮಯದಲ್ಲಿ ಅವರ ನನಸಾದ ಕನಸು ಕೈ ಜಾರಿದೆ. ಕಡಬ ತಾಲೂಕಿನ ಊತ್ತೂರು ಗ್ರಾಮದ ಮುಜೂರು ದಿ. ಕೆಂಚಪ್ಪ ಗೌಡ ಹಾಗು ಹೇಮಾವತಿ ದಂಪತಿಯ ಪುತ್ರ ಚಂದ್ರಶೇಖರ್ ಎಮ್. ಕೆ ಇವರು, ರಿಯಾದ್ ನಲ್ಲಿರುವ(ಸೌದಿ ಅರೇಬಿಯಾ) ಅಲ್ಪಾನರ್ ಸೆರಾಮಿಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಹ್ಯಾಕರ್ ಗಳ ಮೋಸದಾಟಕ್ಕೆ ಸಿಲುಕಿದ ಅವರು ಇದೀಗ ಕಂಬಿ ಹಿಂದೆ ಲಾಕ್ ಆಗಿದ್ದಾರೆ. 2022ರ ನವೆಂಬರ್ ನಿಂದ ರಿಯಾದ್ ನ ಜೈಲಿನಲ್ಲೇ ದಿನ ಕಳೆಯುವ ದುಸ್ಥಿತಿ ಬಂದಿದ್ದು, ಕುಟುಂಬ ಕಣ್ಣೀರಲ್ಲಿ ಕೈತೊಳೆಯುತ್ತಿದೆ.

    ಚಂದ್ರಶೇಖರ್ ಕಳೆದ ವರ್ಷ ಮೊಬೈಲ್ ಮತ್ತು ಸಿಮ್ ಖರೀದಿಗಾಗಿ ರಿಯಾದ್ನಲ್ಲಿರುವ ಮೊಬೈಲ್ ಅಂಗಡಿಯೊಂದಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಚಂದ್ರಶೇಖರ್ ಅವರಿಂಧ 2ಬಾರಿ ತಂಬನ್ನು ಪಡೆಯಲಾಗಿದೆ. ಒಂದು ವಾರದ ಬಳಿಕ ಆ ದೂರವಾಣಿ ಸಂಖ್ಯೆಗೆ ಅರೆಬೀಕ್ ಭಾಷೆಯಲ್ಲಿನ ಸಂದೇಶವೊಂದು ಬಂದಿದ್ದು, ಸಂದೇಶವನ್ನು ಕ್ಲಿಕ್ ಮಾಡಿದ ಚಂದ್ರಶೇಖರ್ ಬಳಿ ಸಿಮ್ ಬಗ್ಗೆಗಿನ ಮಾಹಿತಿ ಹಾಗೂ ಓಟಿಪಿ ಯನ್ನು ಕೇಳಿದ್ದಾರೆ. ಓಟಿಪಿ ಹೇಳಿದ ಚಂದ್ರಶೇಖರ್ ಬಳಿಕ ತಮ್ಮ ಕೆಲಸಕ್ಕೆ ತೆರಳಿದ್ದಾರೆ. ಇದರ ಜತೆ ತಮ್ಮ ನಿಶ್ಚಿತಾರ್ಥ ಮತ್ತಿತ್ತರ ಕೆಲಸದಲ್ಲಿ ಮಗ್ನರಾಗಿದ್ದರು. ಈ ನಡುವೆ ಅಚಾನಕ್ ಆಗಿ ಒಂದು ದಿನ ಪೊಲೀಸರು ಏಕಾಏಕಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದು, ಕುಟುಂಬಕ್ಕೆ ಬರಸಿಡಿಲು ಬಡಿದಂತಾಗುತ್ತದೆ.ರಿಯಾದ್ ದೇಶದ ಚಂದ್ರಶೇಖರ್ ಅವರಿಗೆ ತಿಳಿಯದಂತೆ ಅಲ್ಲಿ ಬ್ಯಾಂಕ್ ವೊಂದರಲ್ಲಿ ಅಕೌಂಟ್ ತೆರೆದಿದ್ದು, ಮತ್ತು ಅದೇ ದೇಶದ ಮಹಿಳೆಯೊಬ್ಬರ 22 ಸಾವಿರ ಈ ಖಾತೆಗೆ ಜಮೆಯಾಗಿ ಕೂಡಲೇ ಅದರಿಂದ ಬೇರೆ ಯಾವುದೋ ದೇಶಕ್ಕೆ ವರ್ಗಾವಣೆಯಾಗಿತ್ತು. ಹಣ ಕಳೆದುಕೊಂಡ ಮಹಿಳೆಯು ಚಂದ್ರಶೇಖರ್ ರವರ ಖಾತೆಗೆ ಜಮೆಯಾಗಿರುವುದನ್ನು ಗಮನಿಸಿ ಚಂದ್ರಶೇಖರ್ ಅವರ ಮೇಲೆ ದೂರನ್ನು ನೀಡಿದ್ದಾರೆ. ಹೀಗಾಗಿ ಪೊಲೀಸರು ಚಂದ್ರಶೇಖರ್ ಅವರನ್ನು ಬಂಧಿಸಿದ್ದಾರೆ. ಹ್ಯಾಕರ್ ಗಳ ಕಿರುಕುಳದಿಂದ ಚಂದ್ರಶೇಖರ್ ಅವರು ಜೈಲಿನಲ್ಲಿ ಬಂಧಿಯಾಗಿದ್ದಾರೆ. ಮಗನ ಆಗಮನಕ್ಕಾಗಿ ತಾಯಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಅಲ್ಲದೆ ಮಗನನ್ನು ಬಿಡಿಸಿಕೊಳ್ಳಲು ಕಳೆದ 8 ತಿಂಗಳಿಂದ ಒದ್ದಾಡುತ್ತಿದ್ದಾರೆ. ಇತ್ತ ಚಂದ್ರಶೇಖರ್ ದುಡಿಯುತ್ತಿದ್ದ ರಿಯಾದ್ ಕಂಪನಿಯೂ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದೆ ಅನ್ಯಾಯ ಮಾಡಿದೆ ಎಂದು ಚಂದ್ರಶೇಖರ್ ಅವರ ತಾಯಿ ಕಣ್ಣೀರಿಡುತ್ತಿದ್ದಾರೆ.ಇನ್ನು ಯುವಕ ಚಂದ್ರಶೇಖರ್ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಲು ಕೇಂದ್ರ ಸರಕಾರ, ವಿದೇಶಾಂಗ ಸಚಿವರು ಒತ್ತಡ ಹಾಕಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾಧಿಕಾರಿಯವರ ಮೂಲಕ ಮನವಿ ಸಲ್ಲಿಸಲಾಗಿದೆ. ಆ ಮೂಲಕ ಯಾವುದೇ ತಪ್ಪು ಮಾಡದೇ ಸೆರೆವಾಸವನ್ನು ಅನುಭವಿಸುತ್ತಿರುವ ಯುವಕನಿಗೆ ನ್ಯಾಯ ಒದಗಿಸುವಂತೆ ಎಂಡೋ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss