ಉಡುಪಿ/ಹಾವೇರಿ: ಕರ್ನಾಟಕ ರಕ್ಷಣಾ ವೇದಿಕೆ ಹಾವೇರಿ ಜಿಲ್ಲಾಧ್ಯಕ್ಷರಾದ ಹನುಮಂತ ಬೋವಿ ಅವರು ಅನಾರೋಗ್ಯದಿಂದ ಕೆ.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯೋಗೀಶ್ ಶೆಟ್ಟಿ ಜಪ್ಪು ಅವರು, ನಾಡು–ನುಡಿಗಾಗಿ ನಿರಂತರ ಹೋರಾಟ ನಡೆಸಿ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಹನುಮಂತ ಬೋವಿಯವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಅವರ ಮುಂದಿನ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ವೆಚ್ಚ ಅಗತ್ಯವಿದ್ದು, ರಾಜ್ಯದ ಜನತೆ ಹಾಗೂ ಸಂಘಟನೆಯ ಕಾರ್ಯಕರ್ತರು ಸಾಧ್ಯವಾದಷ್ಟು ಧನ ಸಹಾಯ ನೀಡಿ ಮಾನವೀಯತೆ ತೋರಿಸಬೇಕು ಎಂದು ಮನವಿ ಮಾಡಿದರು.

ಹನುಮಂತ ಬೋವಿಯವರು ದೀರ್ಘಕಾಲದಿಂದ ಕನ್ನಡ ಪರ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹೋರಾಟಗಾರರಾಗಿದ್ದು, ಇಂತಹ ಸಂದರ್ಭಗಳಲ್ಲಿ ಸಮಾಜವು ಅವರ ಬೆನ್ನಿಗೆ ನಿಲ್ಲುವುದು ಅವಶ್ಯಕ ಎಂದು ಅವರು ತಿಳಿಸಿದರು.
ಈ ಭೇಟಿ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ , ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಮತ್ತು ಸಂಘಟನೆಯ ಪ್ರಮುಖರು ಹಾಗೂ ಆಸ್ಪತ್ರೆಯ ವೈದ್ಯರು ಉಪಸ್ಥಿತರಿದ್ದರು




